ಇನ್ಮುಂದೆ ಸಿಕ್ಕ ಸಿಕ್ಕಿದ್ದನ್ನೆಲ್ಲಾ ಪ್ರಸಾದವೆಂದು ಹಂಚೋಕ್ಕಾಗಲ್ಲ: ಜಾರಿಗೆ ಬಂದಿದೆ ಹೊಸದೊಂದು ನಿಯಮ

Kannada News, Regional, Top News No Comments on ಇನ್ಮುಂದೆ ಸಿಕ್ಕ ಸಿಕ್ಕಿದ್ದನ್ನೆಲ್ಲಾ ಪ್ರಸಾದವೆಂದು ಹಂಚೋಕ್ಕಾಗಲ್ಲ: ಜಾರಿಗೆ ಬಂದಿದೆ ಹೊಸದೊಂದು ನಿಯಮ 28

ಬೆಂಗಳೂರು: ಇನ್ಮುಂದೆ ದೇಗುಲಗಳಲ್ಲಿ, ಚರ್ಚ್ ಹಾಗೂ ಮಸೀದಿಗಳಲ್ಲಿ ಸಿಕ್ಕ ಸಿಕ್ಕಿದ್ದನ್ನೆಲ್ಲಾ ಪ್ರಸಾದ ಎಂದು ಹಂಚುವಾಗಿಲ್ಲ. ಆಹಾರ ಸುರಕ್ಷತಾ ಇಲಾಖೆ ಹೊಸದೊಂದು ನಿಯಮ ಜಾರಿಗೆ ತಂದಿದೆ.

ಹೌದು. ಮುಜುರಾಯಿ ಇಲಾಖೆ ದೇಗುಲ ಸೇರಿದಂತೆ ರಾಜ್ಯದ ಎಲ್ಲಾ ದೇಗುಲಗಳಿಗೆ, ಚರ್ಚ್ ಹಾಗೂ ಮಸೀದಿಗಳಿಗೆ ಆಹಾರ ಸುರಕ್ಷತಾ ಇಲಾಖೆ ನೋಟಿಸ್ ಜಾರಿ ಮಾಡಿದ್ದು, ಪ್ರಸಾದ ವಿನಿಯೋಗಕ್ಕೆ ಲೈಸನ್ಸ್ ಪಡೆಯುವಂತೆ ಸೂಚಿಸಿದೆ.

ಭಕ್ತರಿಗೆ ಪ್ರಸಾದ ರೂಪದಲ್ಲಿ ಯಾವುದೇ ಆಹಾರ ಪದಾರ್ಥ ನೀಡಿದರೂ ಅದನ್ನು ಆಹಾರ ಸುರಕ್ಷತೆ ಇಲಾಖೆಯ ಲ್ಯಾಬ್‍ನಲ್ಲಿ ಪರೀಕ್ಷೆಗೆ ಒಳಪಡಿಸಬೇಕೆಂದು ಹೇಳಿದೆ. ದೇಗುಲದಲ್ಲಿ ವಿತರಣೆ ಮಾಡುವ ಪ್ರಸಾದದಲ್ಲಿ ಗುಣಮಟ್ಟ ಕಾಪಾಡುವುದಿಲ್ಲ ಎಂದು ದೂರುಗಳು ಬಂದ ಹಿನ್ನಲೆಯಲ್ಲಿ ಈ ಕ್ರಮಕ್ಕೆ ಮುಂದಾಗಿರೋದಾಗಿ ಅಧಿಕಾರಿಗಳು ಹೇಳಿದ್ದಾರೆ. ಮೂರು ಬಾರಿ ನೋಟಿಸ್ ನೀಡಿದ ನಂತರವೂ ಲೈಸೆನ್ಸ್ ಪಡೆಯದೇ, ಪ್ರಸಾದ ಪರೀಕ್ಷೆಗೆ ಒಳಪಡಿಸದೇ ವಿತರಣೆ ಮಾಡಿದರೆ ದಂಡ ವಿಧಿಸಲು ಆಹಾರ ಇಲಾಖೆ ನಿರ್ಧರಿಸಿದೆ.

Related Articles

Leave a comment

Back to Top

© 2015 - 2017. All Rights Reserved.