ಕೆಎಸ್‍ಆರ್ ಟಿಸಿ ಬಸ್‍ಗಳ ಮುಖಾಮುಖಿ ಡಿಕ್ಕಿ: ಇಬ್ಬರು ಚಾಲಕರು ಸಾವು

Crime, Kannada News, Regional No Comments on ಕೆಎಸ್‍ಆರ್ ಟಿಸಿ ಬಸ್‍ಗಳ ಮುಖಾಮುಖಿ ಡಿಕ್ಕಿ: ಇಬ್ಬರು ಚಾಲಕರು ಸಾವು 16

ಮಡಿಕೇರಿ: ಕೆಎಸ್‍ಆರ್ ಟಿಸಿ ಬಸ್‍ಗಳ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಚಾಲಕರು ಮೃತಪಟ್ಟು, 15 ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಾಯಗೊಂಡ ಘಟನೆ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ನಡೆದಿದೆ.

ಮಡಿಕೇರಿಯಿಂದ ಹಾಸನಕ್ಕೆ ತೆರಳುತ್ತಿದ್ದ ಮತ್ತು ಮೈಸೂರಿನಿಂದ ಮಡಿಕೇರಿ ಕಡೆಗೆ ಆಗಮಿಸುತ್ತಿದ್ದ ಕೆಎಸ್‍ಆರ್ ಟಿಸಿ ಬಸ್ ಗಳ ನಡುವೆ ಸೋಮವಾರಪೇಟೆ ತಾಲೂಕಿನ ಸುಂಟಿಕೊಪ್ಪ ಸಮೀಪದ ಶಾಂತಿಗೇರಿ ಬಳಿ ಅಪಘಾತ ಸಂಭವಿಸಿದೆ. ಈ ಘಟನೆಯಿಂದ ಎರಡೂ ಬಸ್ ಗಳ ಚಾಲಕರಾದ ಪಾಲಾಕ್ಷ ಹಾಗೂ ಷರೀಫ್ ಸಾವನ್ನಪ್ಪಿದ್ದಾರೆ.

ಹಾಸನ ಕಡೆಗೆ ತೆರಳುತ್ತಿದ್ದ ಬಸ್ ಚಾಲಕ ಪಾಲಾಕ್ಷನ ಅಜಾಗರುಕತೆಯ ಚಾಲನೆಯೇ ಈ ಘಟನೆಗೆ ಕಾರಣ ಎನ್ನಲಾಗಿದ್ದು, ಲಾರಿಯನ್ನು ಓವರ್ ಟೇಕ್ ಮಾಡುವ ಭರದಲ್ಲಿ ಮುಂಬದಿಯಿಂದ ಬರುತ್ತಿದ್ದ ಬಸ್ ಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಎರಡು ಬಸ್ ಚಾಲಕರು ಮೃತಪಟ್ಟಿದ್ದಾರೆ. ಇನ್ನು ಗಾಯಗೊಂಡವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ.

ಘಟನೆ ಸಂಬಂಧ ಸುಂಟಿಕೋಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Leave a comment

Back to Top

© 2015 - 2017. All Rights Reserved.