ಬಾಬ್ರಿ ಮಸೀದಿ-ರಾಮಮಂದಿರ ವಿವಾದ: ನ್ಯಾಯಾಲಯದ ಹೊರಗೆ ಇತ್ಯರ್ಥಕ್ಕೆ ಹಿನ್ನಡೆ

Kannada News, National, Top News No Comments on ಬಾಬ್ರಿ ಮಸೀದಿ-ರಾಮಮಂದಿರ ವಿವಾದ: ನ್ಯಾಯಾಲಯದ ಹೊರಗೆ ಇತ್ಯರ್ಥಕ್ಕೆ ಹಿನ್ನಡೆ 15

ನವದೆಹಲಿ: ತನ್ನ ಒಪ್ಪಿಗೆಯಿಲ್ಲದೇ ಅಯೋಧ್ಯೆ ವಿವಾದವನ್ನು ನ್ಯಾಯಾಲಯದ ಹೊರಗೆ ಇತ್ಯರ್ಥ ಮಾಡುವ ಪ್ರಕ್ರಿಯೆಯಲ್ಲಿ ಪಾಲ್ಗೊಂಡ ಮೌಲಾನ ಸಲ್ಮಾನ್ ನದ್ವಿಯವರನ್ನು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯು ವಜಾಗೊಳಿಸಿದೆ. ಈ ಮೂಲಕ ನ್ಯಾಯಾಲಯದ ಹೊರಗೆ ಬಾಬ್ರಿ ಮಸೀದಿ-ರಾಮಮಂದಿರ ವಿವಾದ ಇತ್ಯರ್ಥ ಪ್ರಯತ್ನಕ್ಕೆ ಹಿನ್ನಡೆಯಾಗಿದೆ.

ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಸದಸ್ಯರಾಗಿರುವ ಸಲ್ಮಾನ್ ನದ್ವಿ, ಎರಡು ದಿನಗಳ ಹಿಂದೆ ರವಿಶಂಕರ್ ಗುರೂಜಿಯನ್ನು ಭೇಟಿಯಾಗಿ ಅಯೋಧ್ಯೆ ವಿಚಾರವಾಗಿ ಮಾತುಕತೆ ನಡೆಸಿದ್ದರು.

ಅಯೋಧ್ಯೆ ವಿವಾದ ಕುರಿತಂತೆ ನ್ಯಾಯಾಲಯದ ತೀರ್ಮಾನವವನ್ನೇ ನೆಚ್ಚಿಕೊಳ್ಳುವ ತನ್ನ ನಿಲುವನ್ನು ಪುನರುಚ್ಚರಿಸಿದ ಮಂಡಳಿ, ಸಲ್ಮಾನ್ ನದ್ವಿಯವರು ಮಂಡಳಿಯ ನಿಲುವಿನ ವಿರುದ್ಧವಾಗಿ ನಡೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಅವರನ್ನು ವಜಾಗೊಳಿಸಲಾಗಿದೆ ಎಂದು ತಿಳಿಸಿದೆ.

Related Articles

Leave a comment

Back to Top

© 2015 - 2017. All Rights Reserved.