ಕೇಂದ್ರ ಸಾಹಿತ್ಯ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ಚಂದ್ರಶೇಖರ ಕಂಬಾರ ಆಯ್ಕೆ

BREAKING NEWS, Kannada News, National, Regional, Top News No Comments on ಕೇಂದ್ರ ಸಾಹಿತ್ಯ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ಚಂದ್ರಶೇಖರ ಕಂಬಾರ ಆಯ್ಕೆ 20

ನವದೆಹಲಿ: ಕೇಂದ್ರ ಸಾಹಿತ್ಯ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಚಂದ್ರಶೇಖರ ಕಂಬಾರ ಅವರು ಆಯ್ಕೆಯಾಗಿದ್ದಾರೆ.

ಇಂದು ನವದೆಹಲಿಯಲ್ಲಿ ನಡೆದ ಸಾಹಿತ್ಯ ಅಕಾಡೆಮಿ ಚುನಾವಣೆಯಲ್ಲಿ ಚಂದ್ರಶೇಖರ್ ಕಂಬಾರ ಅವರು 56 ಮತಗಳನ್ನು ಪಡೆದು ನೂತನ ಸಾರಥಿಯಾಗಿ ಆಯ್ಕೆಯಾಗಿದ್ದಾರೆ. ಒಡಿಯಾ ಲೇಖಕಿ ಪ್ರತಿಭಾ ರೊಯ್​ ಅವರು 29 ಮತ ಪಡೆದರೆ, ಮರಾಠಿ ಲೇಖಕ ಬಾಲಚಂದ್ರ ನೆಮಾಡೆ ಅವರು 4 ಮತ ಪಡೆದರು. ಒಟ್ಟು 89 ಮತಗಳು ಚಲಾವಣೆಯಾದವು. 

ಈ ಮೂಲಕ ಈ ಪ್ರತಿಷ್ಠಿತ ಸ್ಥಾನಕ್ಕೆ ಆಯ್ಕೆಯಾದ 3ನೇ ಕನ್ನಡದ ಸಾಹಿತಿ ಎಂಬ ಗೌರವಕ್ಕೆ ಪಾತ್ರರಾದರು.

Related Articles

Leave a comment

Back to Top

© 2015 - 2017. All Rights Reserved.