ಮೊಬೈಲ್ ಚಾರ್ಜಿಂಗ್ ಮಾಡುವ ವೇಳೆ ವಿದ್ಯುತ್ ಸ್ಪರ್ಶ: ಯುವಕ ಸಾವು

BREAKING NEWS, Crime, Kannada News, Regional No Comments on ಮೊಬೈಲ್ ಚಾರ್ಜಿಂಗ್ ಮಾಡುವ ವೇಳೆ ವಿದ್ಯುತ್ ಸ್ಪರ್ಶ: ಯುವಕ ಸಾವು 47

ಮೈಸೂರು: ಮೊಬೈಲ್ ಚಾರ್ಜಿಂಗ್ ಮಾಡುವ ವೇಳೆ ವಿದ್ಯುತ್ ಸ್ಪರ್ಶವಾಗಿ ಯುವಕನೋರ್ವ ಸಾವನ್ನಪ್ಪಿದ ಘಟನೆ ಮೈಸೂರು-ಬನ್ನೂರು ರಸ್ತೆಯಲ್ಲಿರುವ ದೇವೇಗೌಡ ವೃತ್ತದ ಬಳಿ ನಡೆದಿದೆ.

ಶ್ರೀರಂಗಪಟ್ಟಣ ತಾಲೂಕಿನ ಬಸವಪುರ ಗ್ರಾಮದ ನಿವಾಸಿ ಸಾಗರ್ (20) ಮೃತ ದುರ್ದೈವಿ. ಮೈಸೂರಿನಲ್ಲಿ ಗೂಡ್ಸ್ ಆಟೋ ಓಡಿಸುತ್ತಿದ್ದ ಸಾಗರ್. ಸಿಮೆಂಟ್ ಅಂಗಡಿಯೊಂದರಲ್ಲಿ ಮೊಬೈಲ್ ಚಾರ್ಜ್ ಗೆ ಹಾಕಿದ್ದ ವೇಳೆ ವಿದ್ಯುತ್ ಸ್ಪರ್ಶವಾಗಿದೆ. ತಕ್ಷಣ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.

ಈ ಸಂಬಂಧ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Leave a comment

Back to Top

© 2015 - 2017. All Rights Reserved.