ಬೆಂಗಳೂರಿನಲ್ಲಿ ಮತ್ತೊಂದು ಮ್ಯಾನ್’ಹೋಲ್​ ದುರಂತ: ಇಬ್ಬರು ಸಾವು

BREAKING NEWS, Kannada News, Regional, Top News No Comments on ಬೆಂಗಳೂರಿನಲ್ಲಿ ಮತ್ತೊಂದು ಮ್ಯಾನ್’ಹೋಲ್​ ದುರಂತ: ಇಬ್ಬರು ಸಾವು 12

ಆನೇಕಲ್: ಬೆಂಗಳೂರಿನಲ್ಲಿ ಮತ್ತೊಂದು ಮ್ಯಾನ್ ಹೋಲ್​ ದುರಂತ ಸಂಭವಿಸಿದ್ದು ಇಬ್ಬರು ಕೂಲಿ ಕಾರ್ಮಿಕರು ಬಲಿಯಾಗಿದ್ದಾರೆ.

ಕಳೆದ ಕೆಲ ದಿನಗಳ ಹಿಂದಯಷ್ಟೇ ಬೆಂಗಳೂರಿನ ಸೋಮಸಂದ್ರ ಪಾಳ್ಯದಲ್ಲಿ ನಡೆದಿದ್ದ ಮ್ಯಾನ್ ಹೋಲ್ ದುರಂತ ಮಾಸುವ ಮುನ್ನವೇ ಮಂಗಳವಾರ ಚರಂಡಿ ನೀರನ್ನು ಶುಚಿಗೊಳಿಸಲು ಹೋಗಿ ರಾಯಚೂರು ಮೂಲದ ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ನಡೆದಿದೆ.

ಬೆಂಗಳೂರಿನ ಎಚ್‍ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯ ಎಇಸಿಎಸ್ ಬಡಾವಣೆಯ ವಾಣಿಜ್ಯ ಕಟ್ಟಡದಲ್ಲಿ ಘಟನೆ ಸಂಭವಿಸಿದ್ದು, ರಾಮು(35) ಹಾಗೂ ರವಿ(28)ಮೃತ ದುರ್ದೈವಿಗಳಾಗಿದ್ದಾರೆ.

ನಿನ್ನೆ ಸಂಜೆ ನಾಲ್ಕು ಗಂಟೆ ಸುಮಾರಿಗೆ ಯಮ್ ಲೋಕ್ ಹೋಟೆಲ್ ನ ಚರಂಡಿ ನೀರನ್ನು ಕ್ಲೀನ್ ಮಾಡಲು ವೇಳೆ ರಾಮು ಮ್ಯಾನ್ ಹೋಲ್ ಗೆ ಇಳಿದಿದ್ದಾರೆ. ಈ ವೇಳೆ ಅವರು ಉಸಿರು ಕಟ್ಟಿ ಸಹಾಯಕ್ಕೆ ಕೂಗಾಡಿದ್ದಾರೆ. ರಾಮು ಅವರನ್ನು ರಕ್ಷಣೆ ಮಾಡಲು ರವಿ ಕೂಡ ಒಳಗೆ ಇಳಿದಿದ್ದು ಈ ವೇಳೆ ಇಬ್ಬರು ಸಾವನ್ನಪ್ಪಿದ್ದಾರೆ.

ಈ ವಿಚಾರ ತಿಳಿದ ಸ್ಥಳೀಯರು ಹೆಚ್‍ಎಎಲ್ ಪೊಲೀಸರಿಗೆ ಮಾಹಿತಿ ನೀಡಿದ್ದು ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸ್ ಪಡೆ ಹರಸಹಾಸ ಪಟ್ಟು ಶವವನ್ನು ಹೊರತೆಗೆದಿದ್ದಾರೆ.

Related Articles

Leave a comment

Back to Top

© 2015 - 2017. All Rights Reserved.