ಕಾಲಭೈರವನ ಸನ್ನಿಧಿಯಲ್ಲಿ ಜೆಡಿಎಸ್ ಬಂಡಾಯ ಶಾಸಕರ ವಿಶೇಷ ಪೂಜೆ

BREAKING NEWS, Kannada News, Regional, Top News No Comments on ಕಾಲಭೈರವನ ಸನ್ನಿಧಿಯಲ್ಲಿ ಜೆಡಿಎಸ್ ಬಂಡಾಯ ಶಾಸಕರ ವಿಶೇಷ ಪೂಜೆ 8

ಮಂಡ್ಯ: ಜೆಡಿಎಸ್ ಬಂಡಾಯ ಶಾಸಕರಾದ ಚಲುವರಾಯಸ್ವಾಮಿ, ರಮೇಶ್‍ಬಾಬು ಬಂಡಿಸಿದ್ದೇಗೌಡ ಹಾಗೂ ಬಾಲಕೃಷ್ಣ ಆದಿಚುಂಚನಗಿರಿ ಕಾಲಭೈರವೇಶ್ವರ ಕ್ಷೇತ್ರದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನಲ್ಲಿರುವ ಶ್ರೀ ಕ್ಷೇತ್ರ ಆದಿಚುಂಚನಗಿರಿಗೆ ಕುಟುಂಬ ಸಮೇತರಾಗಿ ಆಗಮಿಸಿ ಮೊದಲು ಹೋಮ ಮಾಡಿಸಿದ್ದಾರೆ. ಸ್ವತಃ ನಿರ್ಮಲಾನಂದನಾಥ ಸ್ವಾಮೀಜಿಗಳೇ ಮುಂದೆ ನಿಂತು ಪೂಜೆ ನೆರವೇರಿಸಿದ್ದಾರೆ. ಈ ಹಿಂದೆ ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಶಾಸಕ ರೇವಣ್ಣ ದಂಪತಿ ಆಗಮಿಸಿ ಆದಿಚುಂಚನಗಿರಿ ಕ್ಷೇತ್ರದ ಕಾಲಭೈರವೇಶ್ವರ ಸ್ವಾಮಿಗೆ ಅಮವಾಸ್ಯೆ ದಿನ ಪೂಜೆ ಸಲ್ಲಿಸಿದ್ದರು.

ಕಾಲಭೈರವೇಶ್ವರನ ಸನ್ನಿಧಿಯಲ್ಲಿ ಸತತ ಮೂರು ಅಮವಾಸ್ಯೆ ಪೂಜೆ ಸಲ್ಲಿಸಿದರೆ ಇಷ್ಟಾರ್ಥ ಸಿದ್ಧಿ ಆಗುತ್ತೆ ಎಂಬ ಪ್ರಬಲವಾದ ನಂಬಿಕೆಯಿದೆ.

Related Articles

Leave a comment

Back to Top

© 2015 - 2017. All Rights Reserved.