ಸಾಯೋ ಮುನ್ನ ಹೆಚ್.ಡಿ ಕುಮಾರಸ್ವಾಮಿರನ್ನ ನೋಡಲು ಹಂಬಲಿಸುತ್ತಿದ್ದಾರೆ ಈ ಪದವೀಧರ

BREAKING NEWS, Kannada News, Regional, Top News No Comments on ಸಾಯೋ ಮುನ್ನ ಹೆಚ್.ಡಿ ಕುಮಾರಸ್ವಾಮಿರನ್ನ ನೋಡಲು ಹಂಬಲಿಸುತ್ತಿದ್ದಾರೆ ಈ ಪದವೀಧರ 12

ಚಿಕ್ಕಮಗಳೂರು: ಕಳೆದ ನಾಲ್ಕೈದು ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿರುವ 24 ವರ್ಷದ ಪದವೀಧರರೊಬ್ಬರು ‘ನಾನು ಸಾಯುವ ಮುನ್ನ ಹೆಚ್.ಡಿ ಕುಮಾರಸ್ವಾಮಿಯವರನ್ನ ನೋಡಬೇಕೆಂದು’ ಚಡಪಡಿಸುತ್ತಿದ್ದಾರೆ.

ಜಿಲ್ಲೆಯ ಕಡೂರು ತಾಲೂಕಿನ ಯಗಟಿ ಹೋಬಳಿಯ ಹಿರೇಗರ್ಜೆ ಗ್ರಾಮದ ಜಗದೀಶ್ ಕಳೆದ ನಾಲ್ಕೈದು ವರ್ಷಗಳಿಂದ ಬಿಪಿ ಹಾಗೂ ಶುಗರ್‍ನಿಂದ ಬಳಲುತ್ತಿದ್ದಾರೆ. 80 ಕೆ.ಜಿ. ಇದ್ದ ಈ ಯುವಕ ಸಂಪೂರ್ಣ ಕುಸಿದೋಗಿದ್ದಾರೆ. ಮಲಗಿದ್ದಲ್ಲೇ ಎಲ್ಲಾ. ಸದಾ ಇವರ ಸೇವೆಗೆ ಮನೆಯಲ್ಲಿ ಒಬ್ಬರು ಇರಲೇಬೇಕು.

ಕೂಲಿ ಮಾಡುವ ಹೆತ್ತವರು ನಾಲ್ಕೈದು ಲಕ್ಷ ಖರ್ಚು ಮಾಡಿದ್ದರೂ ಮಗನನನ್ನ ಹುಷಾರು ಮಾಡಲು ಸರಿಯಾಗದೆ ಕೈಚೆಲ್ಲಿ ಕೂತಿದ್ದಾರೆ. ದಿನದಿಂದ ದಿನಕ್ಕೆ ಆರೋಗ್ಯದ ಸ್ಥಿತಿ ಹದಗೆಡ್ತಿರೋ ಜಗದೀಶ್‍ಗೆ ಸಾಯುವ ಮುನ್ನ ಕುಮಾರಸ್ವಾಮಿಯವರನ್ನ ನೋಡುವ ಹಂಬಲ ವ್ಯಕ್ತಪಡಿಸಿದ್ದಾರೆ.

ನಾನು ಸಾಯುವ ಮುನ್ನ ಶಾಸಕ ವೈ.ಎಸ್.ವಿ ದತ್ತ ಹಾಗೂ ಕುಮಾರಸ್ವಾಮಿಯನ್ನ ನೋಡಬೇಕೆಂಬ ಆಸೆ ಹೊಂದಿದ್ದೇನೆ. ಆದರೆ, ಶಾಸಕ ದತ್ತ ಅವರು ಬಂದು ನೋಡಿಕೊಂಡು ಹೋಗಿದ್ದಾರೆ. ಇದೀಗ ಕೊನೆ ಬಾರಿ ಕುಮಾರಸ್ವಾಮಿಯನ್ನು ನೋಡಬೇಕೆಂದು ಆಸೆ ವ್ಯಕ್ತಪಡಿಸಿದ್ದಾರೆ.

Related Articles

Leave a comment

Back to Top

© 2015 - 2017. All Rights Reserved.