ಕಂಚಿ ಮಠದ ಶ್ರೀ ಜಯೇಂದ್ರ ಸರಸ್ವತಿ ಸ್ವಾಮೀಜಿ ವಿಧಿವಶ

Kannada News, National No Comments on ಕಂಚಿ ಮಠದ ಶ್ರೀ ಜಯೇಂದ್ರ ಸರಸ್ವತಿ ಸ್ವಾಮೀಜಿ ವಿಧಿವಶ 24

ಚೆನ್ನೈ: ಕಾಂಚಿಪುರಂನ ಕಂಚಿ ಮಠದ ಶಂಕರಾಚಾರ್ಯ ಶ್ರೀ ಜಯೇಂದ್ರ ಸರಸ್ವತಿ ಅವರು ಇಂದು ವಿಧಿವಶರಾಗಿದ್ದಾರೆ.

ಕಂಚಿ ಕಾಮಕೋಟಿ ಪೀಠದ 69ನೇ ಪೀಠಾಧಿಪತಿ ಆಗಿರುವ 82 ವರ್ಷದ ಸ್ವಾಮೀಜಿ ಅವರು ಉಸಿರಾಟದ ತೊಂದರೆಯಿಂದ ಕಳೆದ ತಿಂಗಳು ಚೆನ್ನೈನ ರಾಮಚಂದ್ರ ಆಸ್ಪತ್ರೆಗೆ ದಾಖಲಾಗಿದ್ದರು. ಇತ್ತೀಚೆಗಷ್ಟೇ ಅವರು ಆಸ್ಪತ್ರೆಯಿಂದ ಡಿಸ್​ಚಾರ್ಜ್ ಆಗಿ ಮಠಕ್ಕೆ ವಾಪಸ್ಸಾಗಿದ್ದಾರೆ ಎಂದು ಹೇಳಲಾಗಿದೆ.

ಸ್ವಾಮೀಜಿಯವರ ಪಾರ್ಥಿವ ಶರೀರವನ್ನು ಕಂಚಿ ಮಠಕ್ಕೆ ತೆಗೆದುಕೊಂಡು ಹೋಗಿರುವುದಾಗಿ ಮಠದ ಅಧಿಕೃತ ಮೂಲಗಳು ತಿಳಿಸಿವೆ.

Related Articles

Leave a comment

Back to Top

© 2015 - 2017. All Rights Reserved.