ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಸ್ಥಾನ ಮರೆತು ಕೀಳು ಮಟ್ಟದ ರಾಜಕೀಯ ಮಾಡುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

Kannada News, Regional No Comments on ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಸ್ಥಾನ ಮರೆತು ಕೀಳು ಮಟ್ಟದ ರಾಜಕೀಯ ಮಾಡುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ 17

ಕೊಪ್ಪಳ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸ್ಥಾನ ಮರೆತು ಕೀಳು ಮಟ್ಟದ ರಾಜಕೀಯ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ತಾಲೂಕಿನ ಬಸಾಪುರದ ಖಾಸಗಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಸಿಎಂ, ಮೋದಿಯವರು ಸೀದಾ ರೂಪಾಯಿ ಸರ್ಕಾರ ಎನ್ನುತ್ತಿದ್ದಾರೆ. ಮೋದಿ ಆಧಾರ ಇಲ್ಲದ ಆರೋಪ ಮಾಡುತ್ತಿದ್ದಾರೆ. ಒಬ್ಬ ಪ್ರಧಾನ ಮಂತ್ರಿಯಾಗಿ ಇಷ್ಟು ಕೀಳು ಮಟ್ಟದ ರಾಜಕೀಯ ಮಾಡುತ್ತಿರೋದು ನಾನು ಇಲ್ಲಿಯವರೆಗೆ ಯಾರನ್ನು ನೋಡಿಲ್ಲ. ಇದು ಪ್ರಧಾನ ಮಂತ್ರಿ ಸ್ಥಾನಕ್ಕೆ ಕಳಂಕ ತರುವಂತೆ ಮಾಡುತ್ತಿದೆ. ಪ್ರಧಾನಿ ನರೇಂದ್ರ ಮೋದಿಯ ಮಾತಿಗೆ ಮೂರು ಕಾಸಿನ ಕಿಮ್ಮತ್ತು ಇಲ್ಲ ಎಂದರು

ಇನ್ನು ಯಡಿಯೂರಪ್ಪ ಅವರ 75ನೇ ಜನ್ಮದಿನ ಆಚರಣೆ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಬಿಜೆಪಿ ಹಮ್ಮಿಕೊಂಡಿರುವ ರೈತ ಸಮಾವೇಶ ಕುರಿತ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ರೈತರ ವಿಚಾರದಲ್ಲಿ ಯಡಿಯೂರಪ್ಪ ಮೊಸಳೆ ಕಣ್ಣೀರು ಸುರಿಸುತ್ತಾರೆ. ಹಾವೇರಿಯಲ್ಲಿ ರೈತರ ಮೇಲೆ ಗೋಲಿಬಾರ್ ನಡೆಸಿದ್ದರಿಂದ ಇಬ್ಬರು ರೈತರು ಮೃತಪಟ್ಟರು. ಸಾಲ ಮನ್ನಾ ಮಾಡಿ ಎಂದಾಗ ನನ್ನ ಬಳಿ ನೋಟು ಮುದ್ರಿಸುವ ಯಂತ್ರ ಇಲ್ಲ ಎಂದಿದ್ದರು. ಆದರೆ, ಈಗ ಅವರು ರೈತ ಬಂಧು ಹೇಗಾಗುತ್ತಾರೆ ಎಂದು ವ್ಯಂಗ್ಯವಾಡಿದರು.

ಮಹದಾಯಿ ನದಿ ನೀರು ಹಂಚಿಕೆ ವಿವಾದ ಬಗೆಹರಿಸಲು ಬಿಜೆಪಿಗೆ ಇಚ್ಛಾಶಕ್ತಿ ಇಲ್ಲ ಎಂದ ಅವರು ಸಮಸ್ಯೆ ಬಗೆಹರಿಸಲು ಪ್ರಧಾನಿ ನರೇಂದ್ರ ಮೋದಿ ಮಧ್ಯ ಪ್ರವೇಶ ಮಾಡಬೇಕು ಎಂದು ಒತ್ತಾಯಿಸಿದರು.

Related Articles

Leave a comment

Back to Top

© 2015 - 2017. All Rights Reserved.