ಪಾಕ್ಷಿಕ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಸೂಚನೆ

Kannada News, Regional No Comments on ಪಾಕ್ಷಿಕ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಸೂಚನೆ 21

ಮೈಸೂರು: ಮತದಾರರ ಪಟ್ಟಿಯಲ್ಲಿ ಕೈಬಿಟ್ಟಿರುವ 18 ವರ್ಷ ತುಂಬಿದ ಯುವಕರು, ವಿಶೇಷ ಚೇತನರನ್ನು ಮಾರ್ಚ್ 1 ರಿಂದ 15ರ ವರೆಗೆ ಪಾಕ್ಷಿಕ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಬೇಕು ಎಂದು ಜಿಲ್ಲಾ ಪಂಚಾಯತ್‍ನ ಕಾರ್ಯನಿರ್ವಹಣಾಧಿಕಾರಿ ಶಿವಶಂಕರ್ ಅವರು ತಿಳಿಸಿದರು.

ಜಿಲ್ಲಾ ಪಂಚಾಯತ್‍ನ ಸ್ವೀಪ್ ಸಭೆಯಲ್ಲಿ ಮಾತನಾಡಿದ ಅವರು ಚುನಾವಣೆಗೆ ಇಲ್ಲಿಯವರೆಗೆ ಆಗಿರುವ ಕಾರ್ಯಕ್ರಮಗಳು, ಜಾಥಾಗಳ ಬಗ್ಗೆ ಮಾಹಿತಿ ಕಲೆ ಹಾಕಿದರು.

ಜಿಲ್ಲಾ ಪಂಚಾಯತ್‍ನ ಕಾರ್ಯನಿರ್ವಹಣಾಧಿಕಾರಿ ಅಧ್ಯಕ್ಷತೆಯಲ್ಲಿ ರಚಿತವಾಗಿರುವ “ವಿಶೇಷ ಚೇತನರ ಪ್ರತ್ಯೇಕ ಸಮಿತಿ” ರಚಿಸಲಾಗಿದ್ದು ಈ ಸಮಿತಿ ಮೂಲಕ ಮತದಾನದಕ್ಕೆ ಸಂಬಂಧಿಸಿದ ವಿಷಯಗಳನ್ನು ವಿಕಲಚೇತನರಿಗೆ ತಿಳಿಸಬೇಕು ಎಂದರು.

ಗ್ರಾಮ ಪಂಚಾಯಿತಿ ಅಧಿಕಾರಿಗಳು, ಗ್ರಾಮ ಲೆಕ್ಕಿಗರು, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತೆಯರು ಮನೆ ಮನೆಗೆ ಹೋಗಿ ಮತದಾನದ ಅರಿವು ಮೂಡಿಸಬೇಕು. ಮತದಾನ ಕೇಂದ್ರಗಳಲ್ಲಿ ಎಷ್ಟು ಜನ ಅಂಗವಿಕರಿದ್ದಾರೆ ಎಂಬ ಮಾಹಿತಿ ನೀಡಬೇಕು ಎಂದರು.

ಹೆಚ್ಚಿನ ಮಾಹಿತಿಗಾಗಿ ವಿಶೇಷಚೇತನರ ಕಲ್ಯಾಣಾಧಿಕಾರಿಗಳು ದೂರವಾಣಿ ಸಂಖ್ಯೆ: 0821-2490111 ಮೂಲಕ ಸಂಪರ್ಕಿಸುವುದು.

ಸಭೆಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕರಾದ ರಾಜು ಆರ್, ವಿಶೇಷ ಚೇತನರ ಕಲ್ಯಾಣಾಧಿಕಾರಿ ಗೀತಾ ಎನ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

Leave a comment

Back to Top

© 2015 - 2017. All Rights Reserved.