ಮಾದಪ್ಪನ ಹುಂಡಿಯಲ್ಲಿ ದಾಖಲೆಯ ಹಣ ಸಂಗ್ರಹ

Kannada News, Regional, Top News No Comments on ಮಾದಪ್ಪನ ಹುಂಡಿಯಲ್ಲಿ ದಾಖಲೆಯ ಹಣ ಸಂಗ್ರಹ 65

ಚಾಮರಾಜನಗರ: ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ದೇವಸ್ಥಾನ ಹುಂಡಿ ಏಣಿಕೆ ಕಾರ್ಯ ನಡೆದಿದ್ದು ಒಂದು ತಿಂಗಳ ಅವಧಿಯಲ್ಲಿ ದಾಖಲೆಯ 1.65 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ.

ಸಿಸಿ ಕ್ಯಾಮರಾ ಕಣ್ಗಾವಲು, ಪೊಲೀಸ್ ಬಂದೋಬಸ್ತ್​ನಲ್ಲಿ ಎಣಿಕೆ ಕಾರ್ಯ ನಡೆಯಿತು. ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಬುಧವಾರ ಬೆಳಗ್ಗೆ 7 ಗಂಟೆಗೆ ಸಾಲೂರು ಬೃಹನ್ಮಠಾಧ್ಯಕ್ಷ ಗುರು ಸ್ವಾಮೀಜಿ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು.

ಈ ಬಾರಿ ಅಮಾವಾಸ್ಯೆ ಹಾಗೂ 5 ದಿನಗಳ ಕಾಲ ಹಮ್ಮಿಕೊಂಡಿದ್ದ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದಲ್ಲಿ ತಮಿಳುನಾಡು ಸೇರಿದಂತೆ ರಾಜ್ಯದ ವಿವಿಧೆಡೆಯಿಂದ ಲಕ್ಷಾಂತರ ಭಕ್ತರು ಮಹದೇಶ್ವರ ಕ್ಷೇತ್ರಕ್ಕೆ ಭೇಟಿ ನೀಡಿದ್ದು, ಹಣ, ಚಿನ್ನ, ಬೆಳ್ಳಿ ಪದಾರ್ಥಗಳನ್ನು ಹುಂಡಿಗೆ ಹಾಕಿದ್ದರು. ಈ ಹಿನ್ನೆಲೆಯಲ್ಲಿ ಒಂದು ತಿಂಗಳ ಅವಧಿಯಲ್ಲಿ 1,65,51,485 ರೂ. ನಗದು, 105 ಗ್ರಾಂ ಚಿನ್ನ, 1,510 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ. ಕಳೆದ ಬಾರಿ ಒಂದು ತಿಂಗಳ ಅವಧಿಯಲ್ಲಿ 1,11,25,636 ರೂ ನಗದು, 25 ಗ್ರಾಂ ಚಿನ್ನ, 1,382 ಗ್ರಾಂ ಬೆಳ್ಳಿ ಸಂಗ್ರಹವಾಗಿತ್ತು.

Related Articles

Leave a comment

Back to Top

© 2015 - 2017. All Rights Reserved.