ಪರಿಸರ ಮಿತ್ರ ಶಾಲಾ ಪ್ರಶಸ್ತಿ ಪ್ರಧಾನ

Kannada News, Regional No Comments on ಪರಿಸರ ಮಿತ್ರ ಶಾಲಾ ಪ್ರಶಸ್ತಿ ಪ್ರಧಾನ 54

ಮೈಸೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜನಜಾಗೃತಿ ಗ್ರಾಮೀಣ ಅಭಿವೃದ್ಧಿ ಸಂಸ್ಥೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ “ಪರಿಸರ ಮಿತ್ರ ಶಾಲಾ ಪ್ರಶಸ್ತಿ ಪ್ರದಾನ” ಸಮಾರಂಭ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.

ನಗರದ ಪುರ ಭವನದ ಬಳಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್‍ನ ಕಾರ್ಯನಿರ್ವಹಣಾಧಿಕಾರಿ ಪಿ.ಶಿವಶಂಕರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ನಂತರ ಹೆಚ್.ಡಿ ಕೋಟೆಯ ಬೆಟ್ಟದಬೀಡು ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಜಿಲ್ಲಾ ಮಟ್ಟದ ಪರಿಸರ ಮಿತ್ರ ಶಾಲ ಪ್ರಶಸ್ತಿ ಪ್ರಧಾನ ಮಾಡಲಾಯ್ತು. ಹಾಗೂ ವಿವಿಧ ಶಾಲೆಗಳಿಗೆ ಹಸಿರು ಶಾಲೆ ಪ್ರಶಸ್ತಿಯನ್ನು ನೀಡಲಾಯ್ತು.

ಇದಕ್ಕೂ ಮುನ್ನ ಕನಸು ನನಸು ಪುಸ್ತಕವನ್ನು ಲೋಕಾರ್ಪಣೆಗೊಳಿಸಲಾಯ್ತು.ಕಾರ್ಯಕ್ರಮದಲ್ಲಿ ಮಂಡಳಿಯ ಸದಸ್ಯರಾದ ಎಂ.ವೆಂಕಟರಾಮ, ಮೈಸೂರು ಹಿರಿಯ ಪರಿಸರ ಅಧಿಕಾರಿಗಳಾದ ಎ.ಉದಯ ಕುಮಾರ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Related Articles

Leave a comment

Back to Top

© 2015 - 2017. All Rights Reserved.