ಮೈಸೂರು: ಜೆಡಿಎಸ್ ಬಂಡಾಯಗಾರರ ವಿರುದ್ಧ ಹೆಚ್.ಡಿ.ಕೆ ಫುಲ್ ಗರಂ

BREAKING NEWS, Kannada News, Regional, Top News No Comments on ಮೈಸೂರು: ಜೆಡಿಎಸ್ ಬಂಡಾಯಗಾರರ ವಿರುದ್ಧ ಹೆಚ್.ಡಿ.ಕೆ ಫುಲ್ ಗರಂ 17

ಮೈಸೂರು: ಜೆಡಿಎಸ್ ಮೊದಲ ಪಟ್ಟಿ ಬಿಡುಗಡೆಗೊಂಡಿದ್ದು ಮೈಸೂರು ಸೇರಿದಂತೆ ಹಲವೆಡೆ ಜೆಡಿಎಸ್ ಮುಖಂಡರು ಬಂಡಾಯ ಎದ್ದಿರುವ ಹಿನ್ನಲೆ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ ಕುಮಾರಸ್ವಾಮಿ ಅವರು ಫುಲ್ ಗರಂ ಆಗಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರು ಎಲ್ಲಿ ಬೇಕಾದ್ರೂ ಹೋಗಲು ಮುಕ್ತ ಅವಕಾಶವಿದೆ. ಬರೋರು ಬರಬಹುದು, ಹೋಗೋರು ಹೋಗಬಹುದು, ನಾನ್ಯಾರನ್ನು ಹಿಡ್ಕೊಂಡಿಲ್ಲ. ಯಾವುದೇ ರೀತಿಯ ಟಿಕೆಟ್ ಗೊಂದಲವಿಲ್ಲ ಎಂದು ಹೇಳಿದರು.

ಚುನಾವಣೆಯಲ್ಲಿ ಗೆಲ್ಲುವಂತಹ ದೃಷ್ಟಿಯಿಂದಲೇ ತೀರ್ಮಾನಗಳನ್ನು ಮಾಡಿದ್ದೇನೆ. ಇಲ್ಲಿ ಯಾವುದೇ ವ್ಯಾಮೋಹ ಅಥವಾ ಇನ್ಯಾವುದೋ ಕಾರಣಕ್ಕೆ ಟಿಕೆಟ್ ಕೊಡುವ ಪ್ರಶ್ನೆಯಿಲ್ಲ. ಈ ಬಾರಿ ಜನತಾ ದಳ 113 ಸ್ಥಾನ ಗೆಲ್ಲಬೇಕೆಂಬ ಹಿನ್ನೆಲೆಯಲ್ಲಿ ಇಂದು ಈ ತೀರ್ಮಾನ ತೆಗೆದುಕೊಂಡಿದ್ದೇವೆ. ವಿಧಾನ ಪರಿಷತ್ ಸದಸ್ಯ ಸಂದೇಶ್ ನಾಗರಾಜ್ ಅವರಿಗೂ ನಾನು ಹೇಳುವುದಿಷ್ಟೆ, ಹಿಂದುಗಡೆ ಒಂದು, ಮುಂದುಗಡೆ ಒಂದು ಮಾತಾನಾಡುವುದನ್ನು ನಿಲ್ಲಿಸಿ. ಈ ಪಕ್ಷದಿಂದ ಅವರ ಕುಟುಂಬಕ್ಕೆ ಸಿಕ್ಕಿರುವ ಲಾಭವೇನು..? ಹಾಗೂ ಅವರಿಂದ ಈ ಪಕ್ಷಕ್ಕೆ ಸಿಕ್ಕಿರೋ ಲಾಭವೇನು..? ಎಂಬುದನ್ನು ಅವರು ಒಬ್ಬರೇ ಕೂತು ಆತ್ಮವಿಮರ್ಶೆ ಮಾಡಿಕೊಳ್ಳಲಿ ಎಂದರು.

ಈ ಪಕ್ಷ ಇರೋದು ಯಾವುದೇ ಒಂದು ಕುಟುಂಬಕ್ಕಲ್ಲ. ಇದು ದೇವೇಗೌಡ ಕುಟುಂಬಕ್ಕೂ ಸೀಮಿತವಲ್ಲ. ಲಕ್ಷಾಂತರ ಕಾರ್ಯಕರ್ತರು ಕಟ್ಟಿರುವಂತಹ ಪಕ್ಷ ಇದಾಗಿದೆ. ಎಂಎಲ್‍ಸಿ ಚುನಾವಣೆಯಲ್ಲಿ ಎರಡನೇ ಬಾರಿ ಗೆದ್ದು ವೈಯಕ್ತಿಕ ವರ್ಚಸ್ಸಿನಿಂದ ಗೆದ್ದಿದ್ದೀನಿ, ಜೆಡಿಎಸ್ ನಿಂದ ಗೆದ್ದಿಲ್ಲ ಅಂತ ಸಂದೇಶ್ ನಾಗರಾಜ್ ಹೇಳಿಕೆ ಕೊಟ್ಟಿದ್ದರು. ಇಂತಹವರಿಗೆ ಏನಾದ್ರೂ ಅಲ್ಪಸ್ವಲ್ಪ ಪಾಪಪ್ರಜ್ಞೆ ಇದೆಯಾ..? ಇಂತವರಿಂದ ಪಕ್ಷ ಕಟ್ಟಿದ್ದೀನಿ ಅಂತ ತಿಳ್ಕೊಂಡಿದ್ದೀನಾ..? ಹೀಗಾಗಿ ಹೇಳುತ್ತಿದ್ದೇನೆ ಇರೋರು ಇರಬಹುದು ಹೋಗೋರು ಹೋಗ್ಬೋದು ಎಂದು ಖಡಕ್ ಹಾಗಿ ಹೇಳಿದರು.

ಕಾಂಗ್ರೆಸ್ ಮತ್ತು ಬಿಜೆಪಿ ಎರಡು ಪಕ್ಷಗಳು ಪರ್ಸೆಂಟೇಜ್ ಬಗ್ಗೆ ಮಾತಾಡುತ್ತಿವೆ. ಇಬ್ಬರು ಪರ್ಸೆಂಟೇಜ್‍ನಲ್ಲಿ ನಿಸ್ಸೀಮರು. ನನ್ನ ಆಡಳಿತದಲ್ಲಿ ಎಷ್ಟು ಪರ್ಸೆಂಟೇಜ್ ಇತ್ತು, ಬಿಜೆಪಿ ಮತ್ತು ಕಾಂಗ್ರೆಸ್ ಸರ್ಕಾರದಲ್ಲಿ ಎಷ್ಟು ಪರ್ಸೆಂಟೆಜ್ ಇದೆ ಎಂದು ಎಲ್ಲಾ ಗುತ್ತಿಗೆದಾರರಿಗೆ ಗೊತ್ತಿದೆ. ಸಚಿವ ರಮೇಶ್ ಕುಮಾರ್ ಸರ್ಕಾರದ ಭ್ರಷ್ಟಾಚಾರವನ್ನು ವಿಧಾನಸಭೆಯಲ್ಲಿ ಸಮರ್ಥಿಸಿಕೊಳ್ಳುತ್ತಾರೆ. ಇಂತಹ ಸರ್ಕಾರ ಬೇಕಾ? ಪರ್ಸೆಂಟೇಜ್ ರಹಿತ ಸರ್ಕಾರ ಬೇಕಾ? ಜನ ತೀರ್ಮಾನ ಮಾಡಲಿ ಎಂದರು.

ಬೆಂಗಳೂರಿನಲ್ಲಿ ಬಿಜೆಪಿ ಪಾದಯಾತ್ರೆ ವಿಚಾರದ ಸಂಬಂಧ ಪ್ರತಿಕ್ರಿಯಿಸಿದ ಅವರು, ಮೊದಲು ಬೆಂಗಳೂರನ್ನು ಹಾಳು ಮಾಡಿದ್ದು ಬಿಜೆಪಿಯವರು. ನಂತರ ಅದಕ್ಕೆ ಸಿದ್ದರಾಮಯ್ಯ ಕೊಡುಗೆ ಕೊಟ್ಟರು. 5 ವರ್ಷದಲ್ಲಿ ಬೆಂಗಳೂರು ಅಭಿವೃದ್ಧಿಗೆ ಏನನ್ನು ಕೊಟ್ಟಿಲ್ಲ. ಬೆಂಗಳೂರು ಮತ್ತು ಮೈಸೂರು ಏನಾದರು ಅಭಿವೃದ್ಧಿಯಾಗಿದೆ ಅಂದರೆ ಅದು ನನ್ನಿಂದ ಎಂದು ತಿಳಿಸಿದರು.

Related Articles

Leave a comment

Back to Top

© 2015 - 2017. All Rights Reserved.