ಕಾಡಾನೆ ದಾಳಿಗೆ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬಲಿ: ಜಿಲ್ಲಾ ಉಸ್ತುವಾರಿ ಸಚಿವರಿಂದ ಸಂತಾಪ

Kannada News, Regional No Comments on ಕಾಡಾನೆ ದಾಳಿಗೆ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬಲಿ: ಜಿಲ್ಲಾ ಉಸ್ತುವಾರಿ ಸಚಿವರಿಂದ ಸಂತಾಪ 18

ಮೈಸೂರು: ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಕಾಡಾನೆ ದಾಳಿಗೆ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಣಿಕಂಠನ್ ಅವರು ಸಾವನ್ನಪ್ಪಿರುವುದಕ್ಕೆ ಲೋಕೋಪಯೋಗಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಮೃತರ ಆತ್ಮಕ್ಕೆ ಶಾಂತಿ ದೊರಕಲೆಂದು ಸಂತಾಪ ಸೂಚಿಸಿದ್ದಾರೆ.

ಮಣಿಕಂಠನ್ ಅವರು ಅತ್ಯಂತ ದಕ್ಷ ಹಾಗೂ ನಿಷ್ಠಾವಂತ ಅಧಿಕಾರಿಗಳಾಗಿದ್ದರು. ವನ್ಯಜೀವಿಗಳ ಬಗ್ಗೆ ಅಪಾರವಾಗಿ ತಿಳಿದುಕೊಂಡಿದ್ದರು. ಅವರ ಕರ್ತವ್ಯದ ಹೆಚ್ಚು ಸಮಯವನ್ನು ಕಾಡಿನಲ್ಲೇ ಕಳೆಯುತ್ತಿದ್ದರು. ಪರಿಸರ ಹಾಗೂ ಅರಣ್ಯ ಸಂರಕ್ಷಣೆಗೆ ಅಪಾರ ಕಾಳಜಿ ಹೊಂದಿದ್ದರು. ಇವರು ಕರ್ತವ್ಯದ ವೇಳೆ ದುರಾದೃಷ್ಠವಶಾತ್ ಆನೆ ದಾಳಿಗೆ ಸಿಲುಕಿ ಮೃತಪಟ್ಟಿರುವುದು ತುಂಬ ದುಃಖ ಉಂಟಾಗಿದೆ.

ಮಣಿಕಂಠನ್ ಅವರು ಕೆಲಸ ಮಾಡಿದ ಎಲ್ಲಾ ಸ್ಥಳಗಳಲ್ಲೂ ಜನರ ಪ್ರೀತಿ ಗಳಿಸಿದ್ದರು. ಅರಣ್ಯ ಇಲಾಖೆಯ ಅತ್ಯಂತ ಜನಪ್ರಿಯ ಅಧಿಕಾರಿಗಳಾಗಿದ್ದರು. ಇವರ ಅಕಾಲಿಕ ನಿಧನದಿಂದ ಅವರ ಕುಟುಂಬ ವರ್ಗದವರಿಗೆ ಆಗಿರುವ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಸಚಿವರು ತಿಳಿಸಿದ್ದಾರೆ.

Related Articles

Leave a comment

Back to Top

© 2015 - 2017. All Rights Reserved.