ದಾಂಪತ್ಯ ಜೀವನಕ್ಕೆ ಕಾಲಿಟ್ಟ ಹಾಕಿ ಆಟಗಾರ ಎಸ್.ವಿ. ಸುನೀಲ್

Kannada News, Sports No Comments on ದಾಂಪತ್ಯ ಜೀವನಕ್ಕೆ ಕಾಲಿಟ್ಟ ಹಾಕಿ ಆಟಗಾರ ಎಸ್.ವಿ. ಸುನೀಲ್ 12

ಮಂಗಳೂರು: ಭಾರತ ಹಾಕಿ ತಂಡದ ಆಟಗಾರ, ಅರ್ಜುನ ಪ್ರಶಸ್ತಿ ವಿಜೇತ ಕೊಡಗಿನ ಎಸ್.ವಿ. ಸುನೀಲ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ದೇವಾಲಯದ ಕೊರಗಪ್ಪ ಕಲ್ಯಾಣ ಮಂಟಪದಲ್ಲಿ ಸುನೀಲ್, ಮಂಗಳೂರು ಮೂಲದ ನಿಶಾರನ್ನು ವರಿಸಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ನಿಶಾ ಕೊಂಚಾಡಿ ಗ್ರಾಮದ ತಾರನಾಥ-ಸುನಿತಾ ದಂಪತಿಯ ಪುತ್ರಿಯಾಗಿದ್ದು, ಖಾಸಗಿ ಕಂಪೆನಿಯಲ್ಲಿ ಉದ್ಯೋಗದಲ್ಲಿದ್ದಾರೆ.

ಇನ್ನು ಮದುವೆ ಕಾರ್ಯ ವಿಶ್ವಕರ್ಮ ಸಮುದಾಯದ ಪದ್ಧತಿಯಂತೆ ನಡೆದಿದ್ದು, ಸೀಮಿತ ಸಂಖ್ಯೆಯಲ್ಲಿ ಬಂಧು-ಮಿತ್ರರು, ಸ್ನೇಹಿತರು ಹಾಗೂ ಹಾಕಿ ತಂಡದ ಐವರು ಮಿತ್ರರು ಪಾಲ್ಗೊಂಡಿದ್ದರು. ಸೋಮವಾರ ಮಡಿಕೇರಿಯ ಕಾವೇರಿ ಹಾಲ್‍ನಲ್ಲಿ ಆರತಕ್ಷತೆ ನಡೆಯಲಿದ್ದು, ಸ್ನೇಹಿತರು, ಭಾರತ ಹಾಕಿ ತಂಡದ ಆಟಗಾರರು, ಮಾಜಿ ಆಟಗಾರರು ಸೇರಿದಂತೆ ಹಲವು ಅಂತಾರಾಷ್ಟ್ರೀಯ ಆಟಗಾರರು ಪಾಲ್ಗೊಳ್ಳಲಿದ್ದಾರೆ.

Related Articles

Leave a comment

Back to Top

© 2015 - 2017. All Rights Reserved.