ರಾಜ್ಯಸಭೆ ಚುನಾವಣೆಯ ಅಭ್ಯರ್ಥಿಗಳನ್ನು ನಾಳೆ ಅಂತಿಮಗೊಳಿಸಲಾಗುವುದು: ಸಿಎಂ ಸಿದ್ದರಾಮಯ್ಯ

BREAKING NEWS, Kannada News, Regional, Top News No Comments on ರಾಜ್ಯಸಭೆ ಚುನಾವಣೆಯ ಅಭ್ಯರ್ಥಿಗಳನ್ನು ನಾಳೆ ಅಂತಿಮಗೊಳಿಸಲಾಗುವುದು: ಸಿಎಂ ಸಿದ್ದರಾಮಯ್ಯ 26

ಮೈಸೂರು: ರಾಜ್ಯ ಸಭೆ ಚುನಾವಣೆಯ ಅಭ್ಯರ್ಥಿಗಳನ್ನು ನಾಳೆ ಅಂತಿಮಗೊಳಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ತಿಳಿಸಿದ್ದಾರೆ.

ಮೈಸೂರು ಚಾಮರಾಜನಗರ ಪ್ರವಾಸದಲ್ಲಿರುವ ಅವರು ಇಂದು ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿ ಸುದ್ದಿಗಾರರೊಂದಿಗೆ ಮಾತನಾಡಿ ನಾಳೆ ನವದೆಹಲಿಗೆ ತೆರಳಿ ಪಕ್ಷದ ವರಿಷ್ಟರೊಂದಿಗೆ ಚರ್ಚೆ ನಡೆಸಿದ ನಂತರ ಅಭ್ಯರ್ಥಿಗಳನ್ನು ಘೋಷಿಸಲಾಗುವುದು ಎಂದರು.

ರಾಜ್ಯಸಭಾ ಚುನಾವಣೆಗೆ ಯಾವ ಪಕ್ಷದೊಂದಿಗೂ ಹೊಂದಾಣಿಕೆ ಮಾಡಿಕೊಳ್ಳುವ ಅವಶ್ಯಕತೆ ಇಲ್ಲ. ರಾಜ್ಯಸಭೆ ಚುನಾವಣೆ ಮೂರನೇ ಸ್ಥಾನಕ್ಕೆ ಯಾವುದೇ ಮೈತ್ರಿ ಮಾಡಿಕೊಂಡಿಲ್ಲ. ಮುಂಬರುವ ವಿಧಾನ ಸಭಾ ಚುನಾವಣೆಗೂ ಯಾವ ಪಕ್ಷದ ಚುನಾವಣೆಗೆ ಹೊಂದಾಣಿಕೆ ಮಾಡಿಕೊಳ್ಳುವ ಪ್ರಮೇಯ ಇಲ್ಲ ಎಂದು ತಿಳಿಸಿದರು.

ರಾಷ್ಟ್ರೀಯ ಮಟ್ಟದಲ್ಲಿ ಜಾತ್ಯಾತೀತ ಪಕ್ಷಗಳು ಒಂದಾಗುವುದಕ್ಕೆ ನನ್ನ ಸಹ ಮತ ಇದೆ. ಕೋಮುವಾದಿಗಳನ್ನು ಅಧಿಕಾರದಿಂದ ದೂರ ಇಡಲು ಈ ಹೊಂದಾಣಿಕೆ ಅವಶ್ಯಕ. ರಾಜ್ಯದ ಎಲ್ಲಾ ಗ್ರಾಮೀಣ ಪಕ್ಷದಲ್ಲಿ ಕಾಂಗ್ರೆಸ್ ಪಕ್ಷದ ಅಲೆ ಇದೆ. ಬೀದರ್ ನ ಸ್ವತಂತ್ರ ಅಭ್ಯರ್ಥಿ ಅಶೋಕ್ ಕೇಣಿ ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆ. ಇದಕ್ಕೆ ಪಕ್ಷದ ಶಾಸಕರ ವಿರೋಧ ಇಲ್ಲ. ಮೇಘಾಲಯ, ತ್ರಿಪುರ ಚುನಾವಣೆ ಎಫೆಕ್ಟ್ ರಾಜ್ಯದಲ್ಲಿ ಪ್ರಭಾವ ಬೀರುವುದಿಲ್ಲ. ಮೋದಿ ನಾಲ್ಕೈದು ಬಾರಿ ರಾಜ್ಯಕ್ಕೆ ಆಗಮಿಸಿದ್ದರೂ ಸಹ ಯಾವ ಗಾಳಿಯೂ ಬಿಸಿಲ್ಲ. ನಮ್ಮ ಟರ್ಗೇಟ್ ಕೋಮುವಾದಿ ಪಕ್ಷ ಸೋಲಿಸುವುದು. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವ ರು ಮಾ. 25 ರಂದು ಮೈಸೂರಿಗೆ ಆಗಮಿಸಲಿದ್ದು, ಬೃಹತ್ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ ಎಂದು ಮಾಹಿತಿ ನೀಡಿದರು.

Related Articles

Leave a comment

Back to Top

© 2015 - 2017. All Rights Reserved.