ಅಶೋಕ್ ಖೇಣಿ ಕಾಂಗ್ರೆಸ್ ಸೇರ್ಪಡೆ

Kannada News, Regional No Comments on ಅಶೋಕ್ ಖೇಣಿ ಕಾಂಗ್ರೆಸ್ ಸೇರ್ಪಡೆ 45

ಬೆಂಗಳೂರು: ಕರ್ನಾಟಕ ಮಕ್ಕಳ ಪಕ್ಷ ಸಂಸ್ಥಾಪಕ, ಬೀದರ್ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ಅಶೋಕ್ ಖೇಣಿ ಇಂದು ಕಾಂಗ್ರೆಸ್ ಕೇಂದ್ರ ಕಚೇರಿ ಯಲ್ಲಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಕೆಪಿಸಿಸಿ ಪಕ್ಷದ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು ಖೇಣಿ ಅವರಿಗೆ ಕಾಂಗ್ರೆಸ್ ಧ್ವಜ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು. ಇದಕ್ಕೂ ಮುನ್ನ ಖೇಣಿ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿ ಮಾಡಿದರು. ನೈಸ್ ಸಂಸ್ಥೆಯ ಖೇಣಿಯವರನ್ನು ಪಕ್ಷಕ್ಕೆ ಬರಮಾಡಿಕೊಂಡ ಪರಮೇ ಶ್ವರ್, ಖೇಣಿ ಸೇರ್ಪಡೆಯಿಂದ ಬೀದರ್ ಜಿಲ್ಲಾ ಕಾಂಗ್ರೆಸ್ಸಿಗೆ ಬಲ ಬಂದಿದೆ ಎಂದಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಖೇಣಿ ಪಕ್ಷ ಸೇರ್ಪಡೆಯ ವೇಳೆ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಉಪಸ್ಥಿತರಿದ್ದರು.

Related Articles

Leave a comment

Back to Top

© 2015 - 2017. All Rights Reserved.