ಕನಕ ಸಮುದಾಯ ಭವನ ಉದ್ಘಾಟನೆ: ವಿವಿಧ ಸಮುದಾಯ ಭವನಗಳಿಗೆ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ

BREAKING NEWS, Kannada News, Regional, Top News No Comments on ಕನಕ ಸಮುದಾಯ ಭವನ ಉದ್ಘಾಟನೆ: ವಿವಿಧ ಸಮುದಾಯ ಭವನಗಳಿಗೆ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ 42

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನಂಜನಗೂಡು ಬಸ್ ನಿಲ್ದಾಣದ ಹತ್ತಿರ ನಿರ್ಮಿಸಲಾಗಿರುವ ಕನಕ ಸಮುದಾಯ ಭವನವನ್ನು ಇಂದು ಉದ್ಘಾಟಿಸಿದರು, ಹಾಗೆಯೇ ಶಾದಿಮಹಲ್ ಗಳು, ಕ್ರಿಶ್ಚಿಯನ್ ಸಮುದಾಯ ಭವನಗಳಿಗೆ, ಶಂಕುಸ್ಥಾಪನೆ ನೆರವೇರಿಸಿದರು.

ಕನಕ ಸಮುದಾಯ ಭವನ ನಿರ್ಮಾಣಕ್ಕಾಗಿ ಸರ್ಕಾರದಿಂದ 2.5 ಕೋಟಿ ರೂ. ಅನುದಾನ ನೀಡಲಾಗಿದೆ. ಇದರ ಜೊತೆಗೆ ಹಲವಾರು ದಾನಿಗಳು ಸಹ ಈ ಸಮುದಾಯಭವನ ನಿರ್ಮಾಣಕ್ಕಾಗಿ ವಂತಿಕೆ  ನೀಡಿದ್ದಾರೆ. ಈ ಸಮುದಾಯ ಭವನವನ್ನು ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ನಂಜನಗೂಡು ಟೌನ್‍ಗೆ ನಗರೋತ್ಥಾನ ಯೋಜನೆಯಡಿ ವಿವಿಧ  ಅಭಿವೃದ್ಧಿ ಕಾಮಗಾರಿಗಳಿಗಾಗಿ 25 ಕೋಟಿ ರೂ. ಮಂಜೂರು ಮಾಡಲಾಗಿದೆ. ಮುಸ್ಲಿಂ ಸಮುದಾಯದವರ ಶಾದಿಮಹಲ್ ಗಳ ನಿರ್ಮಾಣಕ್ಕಾಗಿ 8 ಕೋಟಿ ರೂ. ಮಂಜೂರು ಮಾಡಲಾಗಿದೆ.  ಮುಸ್ಲಿಂ ಸಮುದಾಯದವರು ವಾಸಿಸುವ ಸ್ಥಳಗಳಲ್ಲಿ ಸಿಸಿ ರಸ್ತೆ ನಿರ್ಮಾಣ ಹಾಗೂ ಒಳಚರಂಡಿ ನಿರ್ಮಾಣಕ್ಕಗಿ 4.5 ಕೋಟಿ ರೂ. ಮಂಜೂರು ಮಾಡಲಾಗಿದೆ.  ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗಾಗಿ 2 ಕೋಟಿ  ಹಾಗೂ ಜೈನ್ ಸಮುದಾಯದವರ ಅಭಿವೃದ್ಧಿಗಾಗಿ 60 ಲಕ್ಷ ರೂ. ಮಂಜೂರು ಮಾಡಲಾಗಿದೆ. ಇವುಗಳ ಶಂಕುಸ್ಥಾಪನೆಗಳನ್ನು ಇಂದು ನೆರವೇರಿಸಲಾಗಿದೆ ಎಂದರು.

ಹಿಂದುಳಿದ, ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದೆ. ಅವುಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ಲೋಕೋಪಯೋಗಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ.ಮಹದೇವಪ್ಪ, ಲೋಕಸಭಾ ಸದಸ್ಯ ಆರ್. ಧ್ರುವನಾರಾಯಣ್, ಶಾಸಕ ಕಳಲೆ ಎನ್. ಕೇಶವಮೂರ್ತಿ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

Related Articles

Leave a comment

Back to Top

© 2015 - 2017. All Rights Reserved.