ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನಿಂತು ಗೆದ್ದು ತೋರಿಸಲಿ: ಯಡಿಯೂರಪ್ಪ ಸವಾಲ್

Kannada News, Regional No Comments on ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನಿಂತು ಗೆದ್ದು ತೋರಿಸಲಿ: ಯಡಿಯೂರಪ್ಪ ಸವಾಲ್ 23

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನಿಂತು ಗೆದ್ದು ತೋರಿಸಲಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸವಾಲ್ ಹಾಕಿದ್ದಾರೆ.

ನಗರದ ಖಿಲ್ಲಾ ಮೊಹಲ್ಲಾದಲ್ಲಿರುವ ಹೊಸಮಠಕ್ಕೆ ಭೇಟಿ ನೀಡಿ ಚಿದಾನಂದ ಸ್ವಾಮೀಜಿಗಳ ಆಶಿರ್ವಾದ ಪಡೆದರು. ಈ ನಂತರ ಮಾಧ್ಯಮಗಳೊಂದಿಗೆ ಮಾತನಾಡಿ ರಾಹುಲ್ ಗಾಂಧಿ ಅವರನ್ನು ಮೈಸೂರು,ಚಾಮರಾಜನಗರ ಜಿಲ್ಲೆಗಳಿಗೆ ಕರೆದುಕೊಂಡು ಬನ್ನಿ ನಮಗೂ ಒಳ್ಳೆಯದು ಯಾಕೆಂದರೆ ರಾಹುಲ್ ಗಾಂಧಿ ಎಲ್ಲೆಲ್ಲ ಹೋಗುತ್ತಾರೋ ಅಲ್ಲಿ ಕಾಂಗ್ರೆಸ್ ಸೋಲನುಭವಿಸುತ್ತದೆ ಎಂದು ವ್ಯಂಗ್ಯವಾಡಿದರು.

ಅಂದು ದೇವೇಗೌಡರು ಸಾವಿರಾರು ಎಕರೆ ಭೂಮಿಯನ್ನು ಲೂಟಿ ಮಾಡಿದರ ಬಗ್ಗೆ ತನಿಖೆಯಾಗಬೇಕು ಎಂದು ಹೇಳಿದ್ದರೋ ಅಂತಹ ಲೂಟಿಕೋರ ಅಶೋಕ್ ಖೇಣಿಯನ್ನು ಕಾಂಗ್ರೆಸ್ ಗೆ ಸೇರಿಸಿಕೊಳ್ಳುವ ಮೂಲಕ ಲೂಟುಕೋರರು, ದರೋಡೆಕೋರರು ಸಹ ಕಾಂಗ್ರೆಸ್ ನಲ್ಲಿ ಇರಬಹುದು ಎಂಬುದನ್ನು ತೋರಿಸಿಕೊಟ್ಟಿದ್ದಾರೆ.

ಇನ್ನು ಭ್ರಷ್ಟರು ಯಾರು ಎಂದು ಬಹಿರಂಗ ಚರ್ಚೆಗೆ ಕರೆ ನೀಡಿದ್ದ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಯಡಿಯೂರಪ್ಪ ನಾನು ಅವರ ಬಳಿ ಯಾವುದೇ ಬಹಿರಂಗ ಚರ್ಚೆಗೆ ಹೋಗಲ್ಲ. ಅವರಿಗೆ ನನ್ನ ಬಳಿ ಮಾತನಾಡು ನೈತಿಕತೆ ಇಲ್ಲ. ಅವರು ಮಾಡಿರುವ ಹಗರಣಗಳ ಬಗ್ಗೆ ಈಗಾಗಲೇ ಚಾರ್ಜ್ ಶೀಟ್ ಪ್ರಿಂಟ್ ಮಾಡಿ ಹಂಚುತ್ತಿದ್ದೇವೆ. ಸಿದ್ದರಾಮಯ್ಯ ರಾಜ್ಯದ ಕಾಂಗ್ರೆಸ್ ಕೊನೆಯ ಮುಖ್ಯಮಂತ್ರಿಯಾಗಲಿದ್ದು, ಅವರು ಕಾಂಗ್ರೆಸ್ ನ ಮುಳುಗಿಸಿ ಹೋಗುತ್ತಾರೆ. ಪ್ರಧಾನಿಗಳ ಕಾಂಗ್ರೆಸ್ ಮುಕ್ತ ಭಾರತ ನಮ್ಮ ಧ್ಯೇಯ ಅದನ್ನು ಮಾಡುತ್ತೇವೆ. ದೇಶದಲ್ಲಿ ಕರ್ನಾಟಕದಲ್ಲಿ ಮಾತ್ರ ಕಾಂಗ್ರೆಸ್ ಇರೋದು ಇಲ್ಲಿಯೂ ಈ ಬಾರಿ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Related Articles

Leave a comment

Back to Top

© 2015 - 2017. All Rights Reserved.