ಸಿಎಂ ತವರು ಜಿಲ್ಲೆಯಲ್ಲಿ ಶೌಚಾಲಯಕ್ಕಾಗಿ ಬಿಸಿಲಲ್ಲೇ ಕೂತು ಶಾಲಾ ವಿದ್ಯಾರ್ಥಿಗಳಿಂದ ಪ್ರತಿಭಟನೆ

BREAKING NEWS, Kannada News, Regional, Top News No Comments on ಸಿಎಂ ತವರು ಜಿಲ್ಲೆಯಲ್ಲಿ ಶೌಚಾಲಯಕ್ಕಾಗಿ ಬಿಸಿಲಲ್ಲೇ ಕೂತು ಶಾಲಾ ವಿದ್ಯಾರ್ಥಿಗಳಿಂದ ಪ್ರತಿಭಟನೆ 21

ಮೈಸೂರು: ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯ ಶಾಲಾ ವಿದ್ಯಾರ್ಥಿಗಳು ಶೌಚಾಲಯಕ್ಕಾಗಿ ಪ್ರತಿಭಟನೆ ನಡೆಸಿದ್ದಾರೆ.

ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕಾರ್ಯ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಬಿಸಿಲಿನಲ್ಲೇ ಕೂತು ಪ್ರತಿಭಟನೆ ನಡೆಸಿದ್ದಾರೆ. ಶಾಲೆಯಲ್ಲಿ ಶೌಚಾಲಯ ಹಾಗೂ ಮೂಲಭೂತ ಸೌಕರ್ಯಗಳು ಇಲ್ಲ. ಕೊಠಡಿ, ಕುಡಿಯುವ ನೀರಿನ ವ್ಯವಸ್ಥೆ ಸರಿ ಇಲ್ಲ. ಬಯಲು ಬಹಿರ್ದೆಸೆಗೆ ಹೋಗಲು ಮುಜುಗರ ಮತ್ತು ತೊಂದರೆ ಆಗುತ್ತಿದೆ ಎಂದು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಧರಣಿ ನಡೆಸುತ್ತಿದ್ದಾರೆ.

ಈ ಬಗ್ಗೆ ಶಿಕ್ಷಣಧಿಕಾರಿಗಳಿಗೆ ಹಲವು ಬಾರಿ ಗಮನಕ್ಕೆ ತರಲಾಗಿದೆ. ಆದರೂ ಸಮಸ್ಯೆ ಬಗೆಹರಿದಿಲ್ಲ. ಇದರಿಂದ ವಿದ್ಯಾರ್ಥಿಗಳು ಪ್ರತಿಭಟನೆ ಮಾರ್ಗ ಹಿಡಿದಿದ್ದಾರೆ ಎಂದು ತಿಳಿದು ಬಂದಿದೆ.

Related Articles

Leave a comment

Back to Top

© 2015 - 2017. All Rights Reserved.