KSRTC ಬಸ್ – ಟೆಂಪೊ ನಡುವೆ ಮುಖಾಮುಖಿ ಡಿಕ್ಕಿ: ಇಬ್ಬರು ಯುವಕರು ಸಾವು

BREAKING NEWS, Crime, Kannada News, Regional No Comments on KSRTC ಬಸ್ – ಟೆಂಪೊ ನಡುವೆ ಮುಖಾಮುಖಿ ಡಿಕ್ಕಿ: ಇಬ್ಬರು ಯುವಕರು ಸಾವು 33

ಮೈಸೂರು: ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ ಅಜಾಗರುಕತೆಯಿಂದ ಭೀಕರ ಅಪಘಾತವೊಂದು ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಯುವಕರು ಮೃತಪಟ್ಟಿದ್ದಾರೆ.

ಮೈಸೂರು ಹುಣಸೂರು ರಸ್ತೆಯ ಇಲವಾಲ ಗ್ರಾಮದ ಬಳಿ KSRTC ಬಸ್ ಹಾಗು ಖಾಸಗಿ ಟೆಂಪೋ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿದೆ. ಟೆಂಪೋದಲ್ಲಿದ್ದ ಕೇರಳ ಮೂಲದ ಇಬ್ಬರು ಯುವಕರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಟೆಂಪೊ ಚಾಲಕ ನಿದ್ದೆ ಮಂಪರಿನಲ್ಲಿದ್ದದ್ದೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ.

ಈ ಸಂಬಂಧ ಇಲವಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Leave a comment

Back to Top

© 2015 - 2017. All Rights Reserved.