Shivakumar KB is the new Deputy Commissioner of Mysore

ರಾಜ್ಯ ಸರ್ಕಾರದ ವಿರುದ್ಧ ತಿರುಗಿಬಿದ್ದಿದ್ದ ರೋಹಿಣಿ ಸಿಂಧೂರಿ: ವರ್ಗವಣೆಗೆ ತಡೆಯಾಜ್ಞೆ..!

BREAKING NEWS, Kannada News, Regional, Top News No Comments on ರಾಜ್ಯ ಸರ್ಕಾರದ ವಿರುದ್ಧ ತಿರುಗಿಬಿದ್ದಿದ್ದ ರೋಹಿಣಿ ಸಿಂಧೂರಿ: ವರ್ಗವಣೆಗೆ ತಡೆಯಾಜ್ಞೆ..! 52

ಹಾಸನ: ರಾಜ್ಯದಲ್ಲಿ ಐಎಎಸ್‌ ಅಧಿಕಾರಿಗಳ ವರ್ಗಾವಣೆ ವಿಷಯದಲ್ಲಿ ಭಾರಿ ಹೈಡ್ರಾಮ ನಡೆಯುತ್ತಿದ್ದು ಇದೀಗ ಹಾಸನ ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಅವರು ರಾಜ್ಯ ಸರ್ಕಾರದ ವಿರುದ್ಧ ತಿರುಗಿಬಿದ್ದಿದ್ದಾರೆ.

ಹೌದು. ರೋಹಿಣಿ ಸಿಂಧೂರಿ ಅವರು ರಾಜ್ಯ ಸರ್ಕಾರದ ವರ್ಗಾವಣೆ ಆದೇಶದ ವಿರುದ್ಧ ಕೇಂದ್ರೀಯ ಆಡಳಿತ ನ್ಯಾಯಮಂಡಳಿ(ಸಿಎಟಿ) ಮೊರೆ ಹೋಗಿದ್ದಾರೆ. ನಿನ್ನೆಯಷ್ಟೇ ರಾಜ್ಯ ಸರ್ಕಾರ ರೋಹಿಣಿ ಸಿಂಧೂರಿ ಸೇರಿ 12 ಐಎಎಸ್‌ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು.

ವರ್ಗಾವಣೆಗೆ ವಿರುದ್ಧ ಸಿಎಟಿ ಮೊರೆ ಹೋದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ಮಾ. 13ರ ವರೆಗೆ ಜಿಲ್ಲಾಧಿಕಾರಿ ಸ್ಥಾನದಿಂದ ವರ್ಗ ಮಾಡದಂತೆ ಸಿಎಟಿ ತಡೆಯಾಜ್ಞೆ ನೀಡಿದೆ.

ಮಾ. 13 ರಂದು ಪ್ರತಿಕ್ರಿಯೆ ನೀಡುವುದಾಗಿ ಸರ್ಕಾರದ ಪರ ವಕೀಲರು ತಿಳಿಸಿದ ಹಿನ್ನೆಲೆಯಲ್ಲಿ ಸಿಎಟಿ 13 ಕ್ಕೆ ಪ್ರಕರಣವನ್ನು ನಿಗದಿಪಡಿಸಿದೆ.

Related Articles

Leave a comment

Back to Top

© 2015 - 2017. All Rights Reserved.