ಸಾಂಸ್ಕೃತಿಕ ನಗರಿಯಲ್ಲಿ ಇಂದು ಹಾಲಿ – ಮಾಜಿ ಸಿಎಂ ಗಳ ಜಿದ್ದಾಜಿದ್ದಿ

Kannada News, Regional, Top News No Comments on ಸಾಂಸ್ಕೃತಿಕ ನಗರಿಯಲ್ಲಿ ಇಂದು ಹಾಲಿ – ಮಾಜಿ ಸಿಎಂ ಗಳ ಜಿದ್ದಾಜಿದ್ದಿ 20

ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ಇಂದು ಹಾಲಿ – ಮಾಜಿ ಸಿಎಂ ಗಳ ಜಿದ್ದಾಜಿದ್ದಿ ಏರ್ಪಡಲಿದೆ. ಜಿಲ್ಲೆಯಲ್ಲಿ ಅಧಿಪತ್ಯ ಸಾಧಿಸಲು ಮೈಸೂರು ಜಿಲ್ಲೆಯಲ್ಲಿ ಸಿದ್ದು – ಹೆಚ್.ಡಿ ಕೆ ಇಂದು ಪ್ರವಾಸ ಕೈಗೊಂಡಿದ್ದಾರೆ.

ಒಂದೆಡೆ ಸಿಎಂ ಸಿದ್ದರಾಮಯ್ಯ ಪಿರಿಯಾಪಟ್ಟಣದಲ್ಲಿ ಶಕ್ತಿ ಪ್ರದರ್ಶನಕ್ಕೆ ಸಜ್ಜಾಗಿದ್ದು ಶಾಸಕ ಹೆಚ್.ಪಿ ಮಂಜುನಾಥ್ ಹಾಗೂ ವೆಂಕಟೇಶ್ ಪರ ಪ್ರಚಾರ ಕೈಗೊಳ್ಳಲಿದ್ದಾರೆ.

ಅತ್ತ ಸಿಎಂ ತವರು ಕ್ಷೇತ್ರ ವರುಣಾದಲ್ಲಿ ಕಾಂಗ್ರೆಸ್ ಕೋಟೆ ಭೇದಿಸಲು ಹೆಚ್ ಡಿ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ವಿಕಾಸ ಪರ್ವ ಕಾರ್ಯಕ್ರಮ ನಡೆಯಲಿದೆ. ವರುಣಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಅಭಿಷೇಕ್ ಪರ ಹೆಚ್.ಡಿ ಕೆ ಪ್ರಚಾರ ಮಾಡಲಿದ್ದಾರೆ.

ಒಟ್ಟಿನಲ್ಲಿ ಚುನಾವಣೆ ಸಮೀಪಿಸಿದಂತೆ ರಾಜಕೀಯ ಪಕ್ಷಗಳು ಗೆಲುವಿಗಾಗಿ ಸಾಕಷ್ಟು ತಂತ್ರ ಪ್ರತಿತಂತ್ರ ರೂಪಿಸಿವೆ. ಇದರಲ್ಲಿ ಗೆಲ್ಲುವವರ್ಯಾರು ಸೋಲುವವರ್ಯಾರು ಅಂತ ಕಾದು ನೋಡಬೇಕಿದೆ.

Related Articles

Leave a comment

Back to Top

© 2015 - 2017. All Rights Reserved.