ವಿವಿಧ ಜಯಂತಿ : ಪೂರ್ವಸಿದ್ಧತಾ ಸಭೆ

Kannada News, Regional No Comments on ವಿವಿಧ ಜಯಂತಿ : ಪೂರ್ವಸಿದ್ಧತಾ ಸಭೆ 58

ಮೈಸೂರು: ಜಿಲ್ಲಾಡಳಿತದ ವತಿಯಿಂದ ಏಪ್ರಿಲ್ 1 ರಂದು ಬೆಳಿಗ್ಗೆ 11 ಗಂಟೆಗೆ ಕಲಾಮಂದಿರದಲ್ಲಿ ದೇವರ ದಾಸಿಮಯ್ಯ ಜಯಂತಿ ಆಚರಿಸಲಾಗುವುದು ಎಂದು ಮೈಸೂರು ಉಪವಿಭಾಗಾಧಿಕಾರಿ ಶಿವೇಗೌಡ ಅವರು ತಿಳಿಸಿದರು.

ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿವಿಧ ಜಯಂತಿ ಆಚರಣೆ ಕುರಿತು ಪೂರ್ವಸಿದ್ಧತಾ ಸಭೆ ನಡೆಸಿ ಮಾತನಾಡಿದರು. ದೇವರ ದಾಸಿಮಯ್ಯ ಜಯಂತಿ ಒಂದು ವರ್ಗದ ಜಯಂತಿಯಲ್ಲಿ ಎಲ್ಲಾ ವರ್ಗದವರು ಸೇರಿ ಅರ್ಥಪೂರ್ಣವಾಗಿ ಜಯಂತಿ ಆಚರಿಸಬೇಕು ಎಂದರು.

ದೇವರ ದಾಸಿಮಯ್ಯ ಜಯಂತಿ ಅಂಗವಾಗಿ ದೇವರ ದಾಸಿಮಯ್ಯ ಅವರ ಮೆರವಣಿಗೆಯನ್ನು ಮೈಸೂರು ನಗರದಲ್ಲಿ ಏಪ್ರಿಲ್ 1 ರಂದು ಬೆಳಿಗ್ಗೆ 9-30 ಗಂಟೆಗೆ ನಡೆಸಲಾಗುವುದು. ಮೆರವಣಿಗೆಗೆ ಕೋಟೆ ಅಂಜುನೇಯ ಸ್ವಾಮಿ ದೇವಸ್ಥಾನದ ಮುಂಭಾಗದಿಂದ ಚಾಲನೆ ನೀಡಲಾಗುವುದು. ಮೆರವಣಿಗೆಯು ಕೆ.ಆರ್.ವೃತ್ತ, ದೇವರಾಜ ಅರಸು ರಸ್ತೆ ಮೂಲಕ ಸಾಗಿ ಕಲಾಮಂದಿರ ಸೇರಲಿದೆ. ಮೆರವಣಿಗೆಗೆ ವಿವಿಧ ಕಲಾತಂಡಗಳನ್ನು ನಿಯೋಜಿಸುವಂತೆ ಹಾಗೂ ವಿವಿಧ ಸಂಸ್ಥೆಯವರು ಸಹ ಕಲಾತಂಡಗಳನ್ನು ನಿಯೋಜಿಸಿ ಮೆರವಣಿಗೆಗೆ ವಿಶೇಷ ಮೆರಗು ನೀಡುವಂತೆ ತಿಳಿಸಿದರು.

ಕಲಾಮಂದಿರದಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ದೇವರ ದಾಸಿಮಯ್ಯ ಅವರ ಉಪನ್ಯಾಸ ಕಾರ್ಯಕ್ರಮ ನಡೆಸಬೇಕು. ಇದಕ್ಕೆ ಸಭೆ ಕರೆದು ಉಪನ್ಯಾಸಕರನ್ನು ಆಯ್ಕೆ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಹೆಚ್. ಚೆನ್ನಪ್ಪ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ವೈ.ಡಿ.ರಾಜಣ್ಣ, ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರಾದ ತಾಯೂರು ವಿಠಲ್‍ಮೂರ್ತಿ, ರವಿಶಂಕರ್, ವೇಣುಗೋಪಲ್, ಮೂರ್ತಿ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

ಮಹವೀರ ಜಯಂತಿ: ಜಿಲ್ಲಾಡಳಿತದ ವತಿಯಿಂದ ಮಾರ್ಚ್ 29 ರಂದು ಬೆಳಿಗ್ಗೆ 11 ಗಂಟೆಗೆ ಅರ್ಥಪೂರ್ಣವಾಗಿ ಮಹವೀರ ಜಯಂತಿಯನ್ನು ಆಚರಿಸಲಾಗುವುದು ಎಂದು ಮೈಸೂರು ಉಪವಿಭಾಗಾಧಿಕಾರಿ ಶಿವೇಗೌಡ ಅವರು ತಿಳಿಸಿದರು.

ಸಭೆಯಲ್ಲಿ ಭಾಗವಹಿಸಿದ್ದ ವಿವಿಧ ಸಂಸ್ಥೆಗಳ ಮುಖಂಡರು ಜೈನ್ ಸಮುದಾಯದ ಎರಡು ಪಂಗಡದವರು ಸೇರಿ ಜಯಂತಿ ಆಚರಿಸಿದರೆ ಅರ್ಥಪೂರ್ಣವಾಗಿರುತ್ತದೆ. ಆದರಿಂದ ಎರಡು ಸಮುದಾಯದವರು ಸೇರಿ ಕಾರ್ಯಕ್ರಮ ಆಯೋಜನೆಯ ಬಗ್ಗೆ ಚರ್ಚಿಸಿ ಜಿಲ್ಲಾಡಳಿತಕ್ಕೆ ತಿಳಿಸಲಾಗುವುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಸಭೆಯಲ್ಲಿ ಜೈನ್ ಸಮುದಾಯದ ಮುಖಂಡರಾದ ಸುನೀಲ್ ಕುಮಾರ್, ನಿತೀಶ್ ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

ದಲಿತ ವಚನಕಾರರ ಜಯಂತಿ: ಜಿಲ್ಲಾಡಳಿತದ ವತಿಯಿಂದ ಮಾರ್ಚ್ 22 ರಂದು ಬೆಳಿಗ್ಗೆ 11 ಗಂಟೆಗೆ ಕಿರುರಂಗಮಂದಿರದಲ್ಲಿ ಆಚರಿಸಲಾಗುವುದು ಎಂದು ಮೈಸೂರು ಉಪವಿಭಾಗಾಧಿಕಾರಿ ಶಿವೇಗೌಡ ಅವರು ತಿಳಿಸಿದರು.

ದಲಿತ ವಚನಕಾರರಾದ ಮಾದಾರ ಚನ್ನಯ್ಯ, ಮಾದಾರ ದೂಳಯ್ಯ, ಡೋಹರ ಕಕ್ಕಯ್ಯ, ಸಮಗಾರ ಹರಳಯ್ಯ, ಉರಿಲಿಂಗ ಪೆದ್ದಿ ಅವರುಗಳು ವಚನ ಮೂಲಪುರುಷರಾಗಿದ್ದು, ಇವರುಗಳ ಬಗ್ಗೆ ದಲಿತ ವಚನಕಾರರ ಜಯಂತಿಯನ್ನು ಆಚರಿಸಲಾಗುತ್ತಿದೆ.

ದಲಿತ ವಚನಕಾರರು ತಮ್ಮ ವಚನಗಳ ಮೂಲಕ ಬಹಳಷ್ಟು ವಿಚಾರಗಳನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡಿದ್ದು, ಸಮಾಜದ ಅಂಕುಡೊಂಕುಗಳನ್ನು ತಿದ್ದಿದರು. ಇವರ ಅಮೂಲ್ಯ ವಚನಗಳನ್ನು ಜನರಿಗೆ ತಿಳಿಸುವುದು ಈ ಜಯಂತಿಯ ಉದ್ದೇಶವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕತಿ ಇಲಾಖೆ ಸಹಾಯಕ ನಿರ್ದೇಶಕ ಹೆಚ್. ಚೆನ್ನಪ್ಪ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ವೈ.ಡಿ.ರಾಜಣ್ಣ, ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರಾದ ತಾಯೂರು ವಿಠಲ್‍ಮೂರ್ತಿ, ರವಿಶಂಕರ್, ವೇಣುಗೋಪಲ್ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

Related Articles

Leave a comment

Back to Top

© 2015 - 2017. All Rights Reserved.