ಮಕ್ಕಳ ಹಕ್ಕುಗಳ ಸಂರಕ್ಷಣೆಯಲ್ಲಿ ಮಾಧ್ಯಮಗಳ ಪಾತ್ರ, ಜವಾಬ್ದಾರಿ ಕುರಿತು ಸಂವಾದ ಕಾರ್ಯಕ್ರಮ

Kannada News, Regional No Comments on ಮಕ್ಕಳ ಹಕ್ಕುಗಳ ಸಂರಕ್ಷಣೆಯಲ್ಲಿ ಮಾಧ್ಯಮಗಳ ಪಾತ್ರ, ಜವಾಬ್ದಾರಿ ಕುರಿತು ಸಂವಾದ ಕಾರ್ಯಕ್ರಮ 16

ಮೈಸೂರು: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮತ್ತು ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಇಂದು ಮಕ್ಕಳ ಹಕ್ಕುಗಳ ಸಂರಕ್ಷಣೆಯಲ್ಲಿ ಮಾಧ್ಯಮಗಳ ಪಾತ್ರ ಮತ್ತು ಜವಾಬ್ದಾರಿ ಕುರಿತು ಕಾರ್ಯಾಗಾರ ನಡೆಯಿತು.

ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಆಯೋಜಿಸಿದ್ದ ಕಾರ್ಯಾಗಾರಕ್ಕೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷೆ ಡಾ.ಕೃಪಾ ಅಮರ್ ಆಳ್ವ ಚಾಲನೆ ನೀಡಿದರು.

ಮಕ್ಕಳ ಪಾಲನೆ, ಪೋಷಣೆ ಮತ್ತು ರಕ್ಷಣೆಗೆ ಸಂಬಂಧಿಸಿದ ಪ್ರಕರಣಗಳನ್ನು ವರದಿ ಮಾಡುವಾಗ ಅನುಸರಿಸಬೇಕಾದ ಕ್ರಮಗಳ ಕುರಿತು ಸಂವಾದ ಹಾಗೂ ಮಕ್ಕಳ ಮಾರಾಟ ಪದ್ದತಿ, ಬಾಲ ಕಾರ್ಮಿಕ ಪದ್ದತಿ, ಬಾಲ್ಯ ವಿವಾಹ, ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಇವುಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದರಲ್ಲಿ ಮಾಧ್ಯಮಗಳ ಪಾತ್ರ ಕುರಿತು ಚರ್ಚೆ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಪತ್ರಕರ್ತ ಸಂಘದ ಅಧ್ಯಕ್ಷ ಸಿ.ಕೆ.ಮಹೇಂದ್ರ, ಸಂಪನ್ಮೂಲ ವ್ಯಕ್ತಿಗಳು ಹಾಗೂ ಹಿರಿಯ ಪತ್ರಕರ್ತರು ಹಾಗೂ ಇನ್ನಿತರರು ಭಾಗವಹಿಸಿದ್ದರು.

Related Articles

Leave a comment

Back to Top

© 2015 - 2017. All Rights Reserved.