ಸಿದ್ದರಾಮಯ್ಯ ಸರ್ಕಾರಕ್ಕೂ ರಾಜರ ಆಳ್ವಿಕೆಗೂ ಹೋಲಿಕೆ ಸರಿಯಲ್ಲ: ಯದುವೀರ್

Kannada News, Regional, Top News No Comments on ಸಿದ್ದರಾಮಯ್ಯ ಸರ್ಕಾರಕ್ಕೂ ರಾಜರ ಆಳ್ವಿಕೆಗೂ ಹೋಲಿಕೆ ಸರಿಯಲ್ಲ: ಯದುವೀರ್ 12

ಮೈಸೂರು: ಸಿದ್ದರಾಮಯ್ಯನವರ ಸರ್ಕಾರಕ್ಕೂ, ಮೈಸೂರು ಮಹಾರಾಜರ ಆಳ್ವಿಕೆಗೂ ಹೋಲಿಕೆ ಮಾಡುವುದು ಸರಿಯಲ್ಲ ಎಂದು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅಸಮಾಧಾನ ವ್ಯಕ್ತಪಡಿಸಿದರು.

ಮಹಾರಾಜರ ನಂತರ ನಮ್ಮ ಸರ್ಕಾರವೇ ಹೆಚ್ಚು ಕೆಲಸ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಕಳೆದ ಎರಡು ದಿನಗಳ ಹಿಂದೆ ಹೇಳಿಕೆ ನೀಡಿದ್ದರು. ನಗರದ ಖಾಸಗಿ ಶಾಲೆಯಲ್ಲಿ ಮಂಗಳವಾರ ಆಯೋಜಿಸಿದ್ದ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಕಾರ್ಯಕ್ರಮದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜರ ಆಳ್ವಿಕೆ ಸಿದ್ದರಾಮಯ್ಯ ಆಳ್ವಿಕೆ ಹೋಲಿಕೆ ಮಾಡುವುದು ಸರಿಯಲ್ಲ. ಅಂದಿನ ರಾಜರ ಕಾಲಕ್ಕೂ, ಇಂದಿನ ಕಾಲಕ್ಕೂ ತುಂಬಾ ವ್ಯತ್ಯಾಸವಿದೆ ಎಂದು ತಿಳಿಸಿದರು.

 ಈ ಕಾಲಕ್ಕೂ ಅಂದಿನ ಕಾಲಕ್ಕೂ ಬಹಳ ವ್ಯತ್ಯಾಸವಿದೆ. ಸಿದ್ದರಾಮಯ್ಯನವರು 5 ವರ್ಷದಲ್ಲಿ ಏನು ಮಾಡಿದ್ದಾರೆ ಮತ್ತು ಮೈಸೂರು ಮಹಾರಾಜರು ಏನು ಮಾಡಿದ್ದಾರೆ ಎಂಬುದನ್ನು ಜನರು ನಿರ್ಧರಿಸುತ್ತಾರೆ ಎಂದರು.

Related Articles

Leave a comment

Back to Top

© 2015 - 2017. All Rights Reserved.