ರಾಜ್ಯದಲ್ಲಿ ನಾಲ್ಕೈದು ದಿನ ಮಳೆ ಸಾಧ್ಯತೆ

Kannada News, Regional No Comments on ರಾಜ್ಯದಲ್ಲಿ ನಾಲ್ಕೈದು ದಿನ ಮಳೆ ಸಾಧ್ಯತೆ 19

ಬೆಂಗಳೂರು: ಅರಬ್ಬಿ ಸಮುದ್ರ ದಕ್ಷಿಣ ಭಾಗದಲ್ಲಿ ವಾಯು ಭಾರ ಕುಸಿತ ಹಿನ್ನಲೆಯಲ್ಲಿ ತಮಿಳುನಾಡು ಹಾಗೂ ಕೇರಳದಲ್ಲಿ ಹೆಚ್ಚಿನ ಮಳೆಯಾಗಲಿದೆ.

ಅಲ್ಲದೆ ರಾಜ್ಯದಲ್ಲಿ ನಾಲ್ಕೈದು ದಿನ ಸಾಧಾರಣ ಮಳೆಯಾಗಲಿದೆ. ನಾಳೆ ಅಥವಾ ನಾಡಿದ್ದು ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ಪ್ರಮುಖವಾಗಿ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಭಾಗದಲ್ಲಿ ಮಳೆಯಾಗುವ ಸಂಭವವಿಧೆ. ರಾಜ್ಯಧಾನಿ ಬೆಂಗಳೂರಲ್ಲೂ ಚದುರಿದಂತೆ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೇ ರಾಜ್ಯದಲ್ಲಿ ಒಂದುವಾರ ಮಟ್ಟಿಗೆ ಉಷ್ಣಾಂಶ ತಗ್ಗಲಿದೆ ರಾಜ್ಯದಲ್ಲಿ ವಿವಿಧ ಭಾಗದಲ್ಲಿ 3 ರಿಂದ 4 ಡಿಗ್ರಿಯಷ್ಟು ಉಷ್ಣಾಂಶ ಕಡಿಮೆಯಾಗಲಿದೆ ಎಂದು ತಿಳಿದುಬಂದಿದೆ.

Related Articles

Leave a comment

Back to Top

© 2015 - 2017. All Rights Reserved.