ಸಿಎಂ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಪ್ರಮೋದ ದೇವಿ ಒಡೆಯರ್

BREAKING NEWS, Kannada News, Regional No Comments on ಸಿಎಂ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಪ್ರಮೋದ ದೇವಿ ಒಡೆಯರ್ 35

ಮೈಸೂರು: ಮಹಾರಾಜರ ನಂತರ ನಮ್ಮ ಸರ್ಕಾರವೇ ಹೆಚ್ಚು ಕೆಲಸ ಮಾಡಿದೆ ಎಂಬ ಕಳೆದ ಮೂರು ದಿನಗಳ ಹಿಂದೆ ಸಿಎಂ ಸಿದ್ದರಾಮಯ್ಯ ಅವರು ನೀಡಿದ್ದ ಹೇಳಿಕೆಗೆ ರಾಜ ಮಾತೆ ಪ್ರಮೋದ ದೇವಿ ಒಡೆಯರ್ ಪ್ರತಿಕ್ರಿಯೆ ನೀಡಿದ್ದಾರೆ.

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿ ಅವರು ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ ಈ ವಿಚಾರದ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಇಲ್ಲ. ಆದರೆ ಯಾರು ಹೆಚ್ಚು ಕೆಲಸ ಮಾಡಿದ್ದಾರೆ ಎಂಬುದನ್ನು ಜನ ತೀರ್ಮಾನ ಮಾಡುತ್ತಾರೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಒಟ್ಟಿನಲ್ಲಿ ಸಿಎಂ ಅವರ ಹೇಳಿಕೆ ಭಾರಿ ಚರ್ಚೆಯಾಗುತ್ತಿದೆ. ನಿನ್ನೆಯಷ್ಟೇ ಸಿದ್ದರಾಮಯ್ಯನವರ ಸರ್ಕಾರಕ್ಕೂ, ಮೈಸೂರು ಮಹಾರಾಜರ ಆಳ್ವಿಕೆಗೂ ಹೋಲಿಕೆ ಮಾಡುವುದು ಸರಿಯಲ್ಲ ಎಂದು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅಸಮಾಧಾನ ವ್ಯಕ್ತಪಡಿಸಿದ್ದರು.

Related Articles

Leave a comment

Back to Top

© 2015 - 2017. All Rights Reserved.