ಸಿಎಂ ಸಿದ್ದರಾಮಯ್ಯ ವಿರುದ್ಧ ಬಾದಾಮಿ ಎಸ್ ಟಿ ಮುಖಂಡರ ಅಸಮಾಧಾನ

BREAKING NEWS, News, Regional No Comments on ಸಿಎಂ ಸಿದ್ದರಾಮಯ್ಯ ವಿರುದ್ಧ ಬಾದಾಮಿ ಎಸ್ ಟಿ ಮುಖಂಡರ ಅಸಮಾಧಾನ 22

ಬಾಗಲಕೋಟೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಬಾದಾಮಿ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವುದು ಖಚಿತವಾಗುತ್ತಿದ್ದಂತೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಎಸ್‌‌ಟಿ ಘಟಕದ ಮುಖಂಡರಿಂದ ಅಸಮಾಧಾನದ ಹೊಗೆ ಕಂಡು ಬಂದಿದೆ.

ಸಿದ್ದರಾಮಯ್ಯನವರು ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವ ಬಗ್ಗೆ ನಮ್ಮ ನಾಯಕರ ಜೊತೆಗೆ ಚರ್ಚೆ ಮಾಡಿಲ್ಲ. ಜಿಲ್ಲೆಯಲ್ಲಿ ಅತಿ ಹೆಚ್ಚು ವಾಲ್ಮೀಕಿ ಜನಾಂಗದ ಮತದಾರರು ಇದ್ದರೂ ಸಹ ಮುಖಂಡರಿಗೆ ರಾಜಕೀಯದಲ್ಲಿ ಸೂಕ್ತ ಪ್ರಾತಿನಿಧ್ಯ ನೀಡಿಲ್ಲ. ಇದರಿಂದ ಮುಂಬರುವ ದಿನಮಾನದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಾನಿ ಉಂಟಾದಲ್ಲಿ ನಾವು ಜವಾಬ್ದಾರರಲ್ಲ ಎಂದು ಎಚ್ಚರಿಕೆ ನೀಡುವ ಮೂಲಕ ಅಸಮಾಧಾನ ಹೊರ ಹಾಕಿದ್ದಾರೆ.

ಬಾದಾಮಿ ಕ್ಷೇತ್ರದಲ್ಲಿ ಸುಮಾರು 20 ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ವಾಲ್ಮೀಕಿ ಜನಾಂಗದವ ಮತದಾರರಿದ್ದು, ಅದು ಅಲ್ಲದೆ ಜಿಲ್ಲೆಯಲ್ಲಿಯೇ ನಿರ್ಣಾಯಕ ಪಾತ್ರ ವಹಿಸಿದ್ದೇವೆ. ಆದರೆ ಇದುವರೆಗೆ ಸೂಕ್ತ ಸ್ಥಾನಮಾನ ಸಿಕ್ಕಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವುದಕ್ಕೆ ಸ್ವಾಗತ ಇದೆ. ಆದರೆ ವಾಲ್ಮೀಕಿ ಜನಾಂಗದವರಿಗೆ ಸ್ಥಾನ ಮಾನ ನೀಡದೇ ಇರುವ ಬಗ್ಗೆ ಅಸಮಾಧಾನವಾಗಿದೆ ಎನ್ನುತ್ತಾರೆ ಸಮುದಾಯದ ಮುಖಂಡರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಾದಾಮಿ ಕ್ಷೇತ್ರಕ್ಕೆ ಸ್ಪರ್ಧೆ ಮಾಡುವ ಮುಂಚೆ ನಮ್ಮ ಜನಾಂಗದ ನಾಯಕರಾದ ಉಗ್ರಪ್ಪ, ಸತೀಶ್‌‌ ಜಾರಕಿಹೊಳಿ ಸೇರಿದಂತೆ ಇತರ ಮುಖಂಡರ ಜೊತೆಗೆ ಚರ್ಚೆ ಮಾಡಿಲ್ಲ. ನಮ್ಮ ಮುಖಂಡರಿಗೆ ಸೂಕ್ತ ಸ್ಥಾನಮಾನ ನೀಡಿದರೆ ಮಾತ್ರ, ಈ ಚುನಾವಣೆಯಲ್ಲಿ ವಾಲ್ಮೀಕಿ ಜನಾಂಗದವರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

 

Related Articles

Leave a comment

Back to Top

© 2015 - 2017. All Rights Reserved.