ಹುಡುಗಿಯರಿಗೆ ಡ್ರಾಪ್ ನೀಡೋ ವೇಳೆ ಬಿಎಂಟಿಸಿ ಬಸ್ ಬಂದಿದ್ದಕ್ಕೆ ಬಸ್ ಡ್ರೈವರ್ ಮೇಲೆ ಹಲ್ಲೆ

Crime, News, Regional No Comments on ಹುಡುಗಿಯರಿಗೆ ಡ್ರಾಪ್ ನೀಡೋ ವೇಳೆ ಬಿಎಂಟಿಸಿ ಬಸ್ ಬಂದಿದ್ದಕ್ಕೆ ಬಸ್ ಡ್ರೈವರ್ ಮೇಲೆ ಹಲ್ಲೆ 26

ಬೆಂಗಳೂರು: ಪ್ರತಿಷ್ಠಿತ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು ಕ್ಷುಲಕ ಕಾರಣಕ್ಕೆ ಬಿಎಂಟಿಸಿ ಚಾಲಕ ಹಾಗೂ ನಿರ್ವಾಹಕರ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್‍ನಲ್ಲಿ ನಡೆದಿದೆ.

ಗುರುವಾರ ಕ್ಷುಲಕ ಕಾರಣಕ್ಕೆ 2 ಬಿಎಂಟಿಸಿ ಬಸ್‍ಗಳ ಚಾಲಕ ಹಾಗೂ ನಿರ್ವಾಹಕರ ಮೇಲೆ ಅಲೆಯನ್ಸ್ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.

ಪರಾರಿಯಾಗುವ ವೇಳೆ ಒಂದು ಬೈಕ್ ಹಾಗೂ ಬ್ಯಾಗ್ ಬಿಟ್ಟು ಹೋಗಿದ್ದು ಬ್ಯಾಗ್‍ನಲ್ಲಿ ಓರ್ವ ವಿದ್ಯಾರ್ಥಿಯ ಭಾವಚಿತ್ರ ಪತ್ತೆಯಾಗಿದೆ. ಇದರ ಆಧಾರದ ಮೇಲೆ ಚಾಲಕ ಹಾಗೂ ನಿರ್ವಾಹಕ ಆನೇಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

 

ಈ ಕಾಲೇಜಿನ ವಿದ್ಯಾರ್ಥಿಗಳು ಈ ಹಿಂದೆಯೂ ಹಲವು ಬಾರಿ ಬಿಎಂಟಿಸಿ ಚಾಲಕ ಹಾಗೂ ನಿರ್ವಾಹಕರ ಮೇಲೆ ಹಲ್ಲೆ ನಡೆಸಿದ್ದು, ಪೊಲೀಸರಿಗೆ ದೂರು ನೀಡಿದರೂ ಪ್ರತಿಷ್ಠಿತ ಕಾಲೇಜು ಎಂಬ ಕಾರಣದಿಂದ ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಿದ್ದಾರೆ ಎಂದು ನಿರ್ವಾಹಕರು ದೂರಿದ್ದಾರೆ.

ಕಾಲೇಜಿನ ವಿದ್ಯಾರ್ಥಿಗಳು ವಿದ್ಯಾರ್ಥಿನಿಯರನ್ನು ತಮ್ಮ ಬೈಕ್‍ಗಳಲ್ಲಿ ಕೂರಿಸಿಕೊಂಡು ಡ್ರಾಪ್ ಮಾಡಲು ಮುಂದಾದ ಸಂದರ್ಭದಲ್ಲಿ ಬಿಎಂಟಿಸಿ ಬಸ್ ಬಂದಿದೆ. ಹೀಗಾಗಿ ವಿದ್ಯಾರ್ಥಿನಿಯರು ಬಸ್‍ನಲ್ಲಿ ಹೊರಟು ಹೋಗುತ್ತಾರೆ. ಇದಕ್ಕೆ ಅಕ್ರೋಶಗೊಂಡ ವಿದ್ಯಾರ್ಥಿಗಳು ಚಾಲಕ, ನಿರ್ವಾಹಕರ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಈ ಹಲ್ಲೆ ಸಂಬಂಧ ಆನೇಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಹಲ್ಲೆ ನಡೆಸಿದ ವಿದ್ಯಾರ್ಥಿಯ ಬೈಕ್ ವಶಕ್ಕೆ ಪಡೆದಿರುವ ಪೊಲೀಸರು ವಿದ್ಯಾರ್ಥಿಗಾಗಿ ಹುಡುಕಾಟ ನಡೆಸಿದ್ದಾರೆ.

 

Related Articles

Leave a comment

Back to Top

© 2015 - 2017. All Rights Reserved.