ಇಂಡಿಯಾ ಟುಡೇ ಸಮೀಕ್ಷೆ ಬಹಿರಂಗ : ಕರ್ನಾಟಕದಲ್ಲಿ ಅತಂತ್ರ ವಿಧಾನಸಭಾ ಚುನಾವಣೆ

BREAKING NEWS, News, Regional, Top News No Comments on ಇಂಡಿಯಾ ಟುಡೇ ಸಮೀಕ್ಷೆ ಬಹಿರಂಗ : ಕರ್ನಾಟಕದಲ್ಲಿ ಅತಂತ್ರ ವಿಧಾನಸಭಾ ಚುನಾವಣೆ 25

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ 2018ರ ಬಗ್ಗೆ ಇಂಡಿಯಾ ಟುಡೇ ಮತ್ತು ಕಾರ್ವಿ ಸಂಸ್ಥೆ ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆ ಬಹಿರಂಗವಾಗಿದೆ. ಈ ಬಾರಿಯ ಚುನಾವಣೆಯಲ್ಲಿ ಅತಂತ್ರ ವಿಧಾನಸಭೆ ರಚನೆಯಾಗಲಿದೆ ಎಂದು ಸಮೀಕ್ಷೆ ಹೇಳಿದೆ.

ಶುಕ್ರವಾರ ಇಂಡಿಯಾ ಟುಡೇ ಮತ್ತು ಕಾರ್ವಿ ಸಂಸ್ಥೆ ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆ ಪ್ರಕಟವಾಗಿದೆ. ಈ ಬಾರಿಯ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಅತಂತ್ರ ವಿಧಾನಸಭೆ ರಚನೆಯಾಗಲಿದೆ ಎಂದು ಸಮೀಕ್ಷೆಯ ವರದಿ ಹೇಳಿದೆ.

ಕರ್ನಾಟಕದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್, 150 ಸ್ಥಾನದಲ್ಲಿ ಜಯಗಳಿಸುತ್ತೇವೆ ಎಂದು ಹೇಳುತ್ತಿರುವ ಬಿಜೆಪಿ ಸಹ ಸ್ಪಷ್ಟ ಬಹುಮತವನ್ನು ಪಡೆಯುವುದಿಲ್ಲ. ಯಾವುದೇ ಪಕ್ಷವೂ 112 ಸ್ಥಾನಗಳನ್ನು ಪಡೆಯುವುದಿಲ್ಲ ಎಂದು ಸಮೀಕ್ಷೆ ಹೇಳಿದೆ.

ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ಪಕ್ಷ ಈ ಬಾರಿಯ ಚುನಾವಣೆಯಲ್ಲಿ ಕಿಂಗ್ ಮೇಕರ್ ಆಗಲಿದೆ. ಜೆಡಿಎಸ್ ಚುನಾವಣೆಯಲ್ಲಿ 34 ರಿಂದ 43 ಸ್ಥಾನಗಳಲ್ಲಿ ಜಯಗಳಿಸಲಿದೆ ಎಂದು ಸಮೀಕ್ಷೆ ಹೇಳಿದೆ. ಮೇ 12 ರಂದು ಕರ್ನಾಟಕ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 15ರಂದು ಫಲಿತಾಂಶ ಪ್ರಕಟವಾಗಲಿದೆ.

Related Articles

Leave a comment

Back to Top

© 2015 - 2017. All Rights Reserved.