ಯೋಗಿ ಆದಿತ್ಯನಾಥ್ ಗೆ ಚಪ್ಪಲಿಯಲ್ಲಿ ಹೊಡೆಯಿರಿ : ವಿವಾದಾತ್ಮಕ ಹೇಳಿಕೆ ನೀಡಿದ ದಿನೇಶ್ ಗುಂಡೂರಾವ್

National, News, Regional No Comments on ಯೋಗಿ ಆದಿತ್ಯನಾಥ್ ಗೆ ಚಪ್ಪಲಿಯಲ್ಲಿ ಹೊಡೆಯಿರಿ : ವಿವಾದಾತ್ಮಕ ಹೇಳಿಕೆ ನೀಡಿದ ದಿನೇಶ್ ಗುಂಡೂರಾವ್ 7

ಬೆಂಗಳೂರು: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಡೋಂಗಿ ವ್ಯಕ್ತಿಯಾಗಿದ್ದು, ಅವರು ಏನಾದ್ರೂ ಮತ್ತೆ ಕರ್ನಾಟಕಕ್ಕೆ ಬಂದರೆ ಚಪ್ಪಲಿಯಲ್ಲಿ ಹೊಡೆಯಿರಿ ಎಂದು ಕೆಪಿಸಿಸಿ ಕಾರ್ಯದರ್ಶಿ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಉತ್ತರ ಪ್ರದೇಶ ಮತ್ತು ಜಮ್ಮು ಕಾಶ್ಮೀರದಲ್ಲಿ ನಡೆದ ಅತ್ಯಾಚಾರ ಪ್ರಕರಣಗಳನ್ನು ಖಂಡಿಸಿ ನಗರದ ಮೌರ್ಯ ಸರ್ಕಲ್ ನ ಗಾಂಧಿ ಪ್ರತಿಮೆ ಬಳಿ ಹಮ್ಮಿಕೊಂಡಿದ್ದ ಪ್ರತಿಭಟನೆ ಸಂದರ್ಭದಲ್ಲಿ ದಿನೇಶ್ ಗುಂಡೂರಾವ್ ಮಾತನಾಡಿದರು. ಯುಪಿ ಸಿಎಂ ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿ ಸ್ಥಾನದಲ್ಲಿ ಇರಲು ಅರ್ಹರಲ್ಲ. ಕೂಡಲೇ ಪ್ರಧಾನಿ ನರೇಂದ್ರ ಮೋದಿ ಅವರು ಅವರನ್ನು ಸಿಎಂ ಸ್ಥಾನದಿಂದ ಕಿತ್ತೊಗೆಯಬೇಕು. ಅವರು ಕರ್ನಾಟಕಕ್ಕೆ ಬಂದು ಭಾಷಣ ಮಾಡುತ್ತಾರೆ. ಈ ಬಾರಿ ಯೋಗಿ ಆದಿತ್ಯನಾಥ್ ಕರ್ನಾಟಕಕ್ಕೆ ಬಂದರೆ ಚಪ್ಪಲಿಯಲ್ಲಿ ಹೊಡೆಯಿರಿ ಎಂದು ಹೇಳಿದರು.

ತಮ್ಮ ಭಾಷಣದುದ್ದಕ್ಕೂ ಸಿಎಂ ಆದಿತ್ಯನಾಥ್ ರನ್ನು ಏಕವಚನದಲ್ಲೇ ವಾಗ್ದಾಳಿ ನಡೆಸಿದ ದಿನೇಶ್ ಗುಂಡೂರಾವ್, ಅದಿತ್ಯನಾಥ್ ಕರ್ನಾಟಕಕ್ಕೆ ಬಂದರೆ ನಾಡಿಗೆ ಅಪಮಾನವಾಗುತ್ತದೆ ಎಂದು ಆರೋಪಿಸಿದರು.

 

Related Articles

Leave a comment

Back to Top

© 2015 - 2017. All Rights Reserved.