ಚುನಾವಣಾ ಅಖಾಡದಲ್ಲಿ ಗಂಡ-ಹೆಂಡತಿ

News, Regional, Top News No Comments on ಚುನಾವಣಾ ಅಖಾಡದಲ್ಲಿ ಗಂಡ-ಹೆಂಡತಿ 9
ನಿಪ್ಪಾಣಿ : ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಹಿನ್ನೆಲೆಯಲ್ಲಿ ಇಂದು ಬಿಜೆಪಿ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದ್ದು, ಇದರಲ್ಲಿ ಗಂಡ ಹೆಂಡತಿ ಇಬ್ಬರಿಗೂ ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡಿದೆ.
ನಿನ್ನೆಮಧ್ಯಾಹ್ನ ಬಿಜೆಪಿ ಬಿಡುಗಡೆ ಮಾಡಿದ 82 ಅಭ್ಯರ್ಥಿಗಳ ಎರಡನೇ ಪಟ್ಟಿಯಲ್ಲಿ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಕ್ಷೇತ್ರದಿಂದ ಹಾಲಿ ಶಾಸಕಿ ಶಶಿಕಲಾ ಜೊಲ್ಲೆ ಅವರಿಗೆ ಮೊದಲ ಪಟ್ಟಿಯಲ್ಲಿ ಟಿಕೆಟ್ ನೀಡಿತ್ತು. ಇದರ ಜೊತೆಗೆ, ಶಶಿಕಲಾ ಅವರ ಪತಿ ಅಣ್ಣಾ ಸಾಹೇಬ್ ಜೊಲ್ಲೆ ಅವರಿಗೆ ಚಿಕ್ಕೋಡಿ-ಸದಲಗ ಕ್ಷೇತ್ರದಿಂದ ಎರಡನೇ ಪಟ್ಟಿಯಲ್ಲಿ ಬಿಜೆಪಿ ಟಿಕೆಟ್ ನೀಡಿದೆ.
ಶಶಿಕಲಾ ಜೊಲ್ಲೆ ಈಗಾಗಲೇ ಆ ಕ್ಷೇತ್ರದ ಹಾಲಿ ಶಾಸಕಿಯಾಗಿದ್ದು, ಎರಡನೇ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ.
ಆದರೆ ಇವರ ಪತಿ ಅಣ್ಣಾ ಸಾಹೇಬ್ ಜೊಲ್ಲೆ ಮೊದಲ ಬಾರಿಗೆ ಚುನಾವಣಾ ಎದುರಿಸುತ್ತಿದ್ದರೂ, ಆ ಕ್ಷೇತ್ರದ ಜನರ ಅಭಿವೃದ್ಧಿಗೆ ತಮ್ಮದೇ ಕೊಡುಗೆ ನೀಡಿದ್ದಾರೆ.

Related Articles

Leave a comment

Back to Top

© 2015 - 2017. All Rights Reserved.