ವರುಣಾದಿಂದ ವಿಜಯೇಂದ್ರ ಸ್ಪರ್ಧೆಯಿಲ್ಲ

BREAKING NEWS, News, Regional, Top News No Comments on ವರುಣಾದಿಂದ ವಿಜಯೇಂದ್ರ ಸ್ಪರ್ಧೆಯಿಲ್ಲ 12

ಮೈಸೂರು : ಕರ್ನಾಟಕ ಬಿಜೆಪಿ ನಾಮಪತ್ರ ಸಲ್ಲಿಸಲು ಒಂದು ದಿನ ಬಾಕಿ ಇರುವಾಗ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ವರುಣಾ ವಿಧಾನಸಭಾ ಕ್ಷೇತ್ರದಿಂದ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಅವರು ಚುನಾವಣೆಗೆ ಸ್ಪರ್ಧಿಸುತ್ತಿಲ್ಲ.

ನಂಜನಗೂಡಿನಲ್ಲಿ ಸೋಮವಾರ ನಡೆದ ಸಮಾವೇಶದಲ್ಲಿ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು, ‘ವರುಣಾ ಕ್ಷೇತ್ರದಲ್ಲಿ ಬಿ.ವೈ.ವಿಜಯೇಂದ್ರ ಅವರು ಸ್ಪರ್ಧಿಸುತ್ತಿಲ್ಲ. ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ನೀಡಲಾಗುತ್ತದೆ’ ಎಂದು ಘೋಷಣೆ ಮಾಡಿದರು.

ವರುಣಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯನ್ನು ಇನ್ನೂ ಘೋಷಣೆ ಮಾಡಿಲ್ಲ. ಆದರೆ, ಸೋಮವಾರ ಬಿ.ವೈ.ವಿಜಯೇಂದ್ರ ಅವರು ವರುಣಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಲು ಸಕಲ ಸಿದ್ಧತೆ ಮಾಡಿಕೊಂಡಿದ್ದರು. ಅದಕ್ಕೂ ಮೊದಲು ಈ ನಿರ್ಧಾರ ಹೊರಬಿದ್ದಿದೆ.

ಕಾರ್ಯಕರ್ತರ ಆಕ್ರೋಶ : ‘

ವರುಣಾ ಕ್ಷೇತ್ರದಿಂದ ಬಿ.ವೈ.ವಿಜಯೇಂದ್ರ ಸ್ಪರ್ಧೆ ಮಾಡುವುದಿಲ್ಲ′ ಎಂದು ಯಡಿಯೂರಪ್ಪ ಘೋಷಣೆ ಮಾಡುತ್ತಿದ್ದಂತೆ ಕಾರ್ಯಕರ್ತರು ಆಕ್ರೋಶಗೊಂಡರು. ಆದರೆ, ಯಡಿಯುರಪ್ಪ ಅವರು ವೇದಿಕೆಯಿಂದ ನಿರ್ಗಮಿಸಿದರು.

ಕಾರ್ಯಕರ್ತರು ವಿಜಯೇಂದ್ರ ಅವರಿಗೆ ಘೇರಾವ್ ಹಾಕಿ, ನಿವೇ ಅಭ್ಯರ್ಥಿಯಾಗಬೇಕು ಎಂದು ಒತ್ತಾಯಿಸಿದರು. ಖುರ್ಚಿಗಳನ್ನು ಎಸೆದು ಆಕ್ರೋಶ ವ್ಯಕ್ತಪಡಿಸಿದರು.

ಇಂದು ಸಂಜೆ ಅಭ್ಯರ್ಥಿ ಘೋಷಣೆ : ವರುಣಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಯಾರು? ಎಂದು ಇಂದು ಸಂಜೆ ಘೋಷಣೆ ಮಾಡಲಾಗುತ್ತದೆ. ಬಿಜೆಪಿ ಇನ್ನೂ 11 ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಘೋಷಣೆ ಮಾಡಬೇಕಾಗಿದೆ.

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ರೇವಣ ಸಿದ್ದಯ್ಯ ಅವರು ಬಿಜೆಪಿ ಅಭ್ಯರ್ಥಿಯಾಗಬಹುದು ಎಂದು ಅಂದಾಜಿಸಲಾಗಿದೆ. ಆದರೆ, ಬಿ.ವೈ.ವಿಜಯೇಂದ್ರ ಅವರನ್ನು ಬದಲಾವಣೆ ಮಾಡುವ ನಿರ್ಧಾರವನ್ನು ಏಕೆ ಕೈಗೊಳ್ಳಲಾಯಿತು ಎಂಬ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ.

ವರುಣಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಅವರು ಅಭ್ಯರ್ಥಿಯಾಗಿದ್ದಾರೆ. ಅಭಿಷೇಕ್ ಎಂಬುವವರು ಜೆಡಿಎಸ್ ಅಭ್ಯರ್ಥಿಯಾಗಿದ್ದಾರೆ.

Related Articles

Leave a comment

Back to Top

© 2015 - 2017. All Rights Reserved.