ಮೋದಿ ಮರ್ಯಾದೆ ಬಿಟ್ಟು ಮಾತಾಡ್ತಾ ಇದ್ದಾರೆ – ಸಿದ್ದರಾಮಯ್ಯ

News, Regional, Top News No Comments on ಮೋದಿ ಮರ್ಯಾದೆ ಬಿಟ್ಟು ಮಾತಾಡ್ತಾ ಇದ್ದಾರೆ – ಸಿದ್ದರಾಮಯ್ಯ 9

ಬೆಂಗಳೂರು : ನರೇಂದ್ರ ಮೋದಿ ಅವರು ತಾನು ದೇಶದ ಪ್ರಧಾನಿ ಎನ್ನುವುದನ್ನು ಮರೆತು, ಮರ್ಯಾದೆ ಬಿಟ್ಟು ಮಾತನಾಡುತ್ತಿದ್ದಾರೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.

ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಬಗ್ಗೆ ನಮಗೂ ಗೌರವ ಇದೆ ಆದರೆ ಅವರು ಮರ್ಯಾದೆ ಬಿಟ್ಟು ಮಾತನಾಡುವಾಗ ನಾವು ಉತ್ತರಿಸಬೇಕೆಲ್ಲವೇ ? ಎಂದು ಪ್ರಶ್ನಿಸಿದರು.

ಮಾಜಿ ಉಪಪ್ರಧಾನಿ ಎಲ್ ಕೆ ಅಡ್ವಾಣಿ, ಮಾಜಿ ವಿತ್ತ ಸಚಿವ ಯಶವಂತ ಸಿನ್ಹಾ ಅವರಂತಹ ನಾಯಕರಿಗೆ ಗೌರವ ಕೊಡಲು ಮೋದಿಗೆ ಗೊತ್ತಿಲ್ಲ. ಹಿಂದೆ ಲೋಕಸಭಾ ಚುನಾವಣೆ ವೇಳೆ ದೇವೇಗೌಡರನ್ನು ವೃದ್ಧಾಶ್ರಮಕ್ಕೆ ಕಳುಹಿಸಬೇಕೇಂದು ಹೇಳಿದ್ದ ಮೋದಿಗೆ ಚುನಾವಣೆ ಸಮೀಪಿಸಿರುವ ಹಿನ್ನೆಲೆಯಲ್ಲಿ ರಾಜಕೀಯ ಲಾಭ ಪಡೆಯಲು ಮಾಜಿ ಪ್ರಧಾನಿ ದೇವೇಗೌಡರ ಮೇಲೆ ಪ್ರೀತಿ ಬಂದಿದೆ ಎಂದರು

ಮುಂದಿನ ಮುಖ್ಯಮಂತ್ರಿ ಯಾರೆಂದು ಪಕ್ಷದ ಹೈಕಮಾಂಡ್ ತೀರ್ಮಾನಿಸುತ್ತದೆ. ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ನಡುವೆ ತನಗೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಎಂದು ಮುಖ್ಯ ಮಂತ್ರಿ ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ ಮುಂದೆ ನಡೆಯವ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಬಹುಮತ ಪಡೆದು ಮರಳಿ ಅಧಿಕಾರಕ್ಕೆ ಬರುತ್ತದೆ ಎಂದು ಹೇಳಿದರು.

Related Articles

Leave a comment

Back to Top

© 2015 - 2017. All Rights Reserved.