ಎಸ್ಎಸ್ ಎಲ್ ಸಿ ಫಲಿತಾಂಶ ಪ್ರಕಟ

News, Regional, Top News No Comments on ಎಸ್ಎಸ್ ಎಲ್ ಸಿ ಫಲಿತಾಂಶ ಪ್ರಕಟ 9

ಬೆಂಗಳೂರು: ಕಳೆದ ಮಾರ್ಚ್-ಏಪ್ರಿಲ್ ನಲ್ಲಿ ನಡೆದ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಿದೆ.

ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜಿನೀಶ್ ಫಲಿತಾಂಶ ಪ್ರಕಟ ಮಾಡಿದ್ದು, 71.93 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಕಳೆದ ಬಾರಿಗಿಂತ ಈ ಬಾರಿ ಶೇ.4ರಷ್ಟು ಹೆಚ್ಚಳವಾಗಿದೆ. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಉಡುಪಿ ಪ್ರಥಮ ಸ್ಥಾನವಾಗಿದ್ದು, ಉತ್ತರ ಕನ್ನಡ ದ್ವಿತೀಯ, ಚಿಕ್ಕೋಡಿ ತೃತೀಯ ಹಾಗೂ ಯಾದಗಿರಿ ಕೊನೆಯ ಸ್ಥಾನ ಗಳಿಸಿವೆ ಎಂದು ಅವರು ಹೇಳಿದ್ರು.ಮಧ್ಯಾಹ್ನ 1 ಗಂಟೆಯ ನಂತ್ರ ಎಸ್.ಎಸ್.ಎಲ್.ಸಿ ಬೋರ್ಡ್ ವೆಬ್ ಸೈಟ್ ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ಮೇ 8 ರಂದು ಎಲ್ಲಾ ಶಾಲೆಗಳಲ್ಲಿ ಫಲಿತಾಂಶ ಪ್ರಕಟಗೊಳ್ಳಲಿದೆ.

ಈ ಬಾರಿ ಸುಮಾರು 8 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಫಲಿತಾಂಶ ಲಭ್ಯವಾಗೋ ವೆಬ್ ಸೈಟ್ ಈ ಕೆಳಗಿನಂತಿದೆ.

http://sslc.kar.nic.in

http://karresults.nic.in

Related Articles

Leave a comment

Back to Top

© 2015 - 2017. All Rights Reserved.