ನಾಳೆ ರೈತ ಮುಖಂಡರು ಪ್ರತಿಪಕ್ಷ ನಾಯಕರ ಜತೆ ಸಿಎಂ ಸಭೆ

News, Regional, Top News No Comments on ನಾಳೆ ರೈತ ಮುಖಂಡರು ಪ್ರತಿಪಕ್ಷ ನಾಯಕರ ಜತೆ ಸಿಎಂ ಸಭೆ 19

 ಬೆಂಗಳೂರು : ಕೃಷಿ ಸಾಲ ಮನ್ನಾ,  ರೈತರ ಆತ್ಮಹತ್ಯೆ ಹಾಗೂ ಕೃಷಿಕರ ಇತರ ಸಮಸ್ಯೆಗಳ ಕುರಿತು ಚರ್ಚಿಸಲು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಮೇ 30 ರಂದು ಬೆಳಿಗ್ಗೆ 11 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ  ರೈತ ಸಂಘಟನೆಗಳ ಪ್ರತಿನಿಧಿಗಳು ಹಾಗೂ ಪ್ರಗತಿಪರ ಕೃಷಿಕರ ಸಭೆ ಕರೆದಿದ್ದಾರೆ.

ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅವರು ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದು,ವಿರೋಧ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಅವರನ್ನು ಸಹ ಈ ಸಭೆಗೆ ಆಹ್ವಾನಿಸಲಾಗಿದೆ. ಅಲ್ಲದೆ, ಪ್ರತಿ ಜಿಲ್ಲೆಯಿಂದ ಪ್ರಗತಿಪರ ಕೃಷಿಕರನ್ನು ಈ ಸಭೆಗೆ ಅಹ್ವಾನಿಸಲಾಗಿದೆ. 

Related Articles

Leave a comment

Back to Top

© 2015 - 2017. All Rights Reserved.