ಮುಂದುವರಿದ ಮಳೆ; ಹಲವೆಡೆ ರಸ್ತೆ ಸಂಪರ್ಕ ಕಡಿತ

BREAKING NEWS, News, Regional, Top News No Comments on ಮುಂದುವರಿದ ಮಳೆ; ಹಲವೆಡೆ ರಸ್ತೆ ಸಂಪರ್ಕ ಕಡಿತ 38

ಮಂಗಳೂರು: ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆ ಗುರುವಾರ ರಾತ್ರಿಯಿಂದ ತೀವ್ರಗೊಂಡಿದೆ. ದಿಢೀರನೆ ರಭಸಗೊಂಡ ಮಳೆಯ ಪರಿಣಾಮವಾಗಿ ರಾಜ್ಯದ ಹಲವು ಪ್ರಮುಖ ಸಂಪರ್ಕ ರಸ್ತೆಗಳು ಕಡಿತಗೊಂಡಿವೆ.

ಪ್ರಸಿದ್ಧ ತೀರ್ಥ ಕ್ಷೇತ್ರ ಶೃಂಗೇರಿಯಲ್ಲಿ ತುಂಗಾ ನದಿ ಅಪಾಯದ ಮಟ್ಟವನ್ನು ಮೀರಿ‌ ಹರಿಯುತ್ತಿದ್ದು, ಹಲವು ಪ್ರದೇಶಗಳು ಜಲಾವೃತಗೊಂಡಿವೆ. ಭಕ್ತರು ಹಾಗೂ ಪ್ರವಾಸಿಗರು ಮಳೆಯಿಂದ ಪರಿತಪಿಸುವಂತಾಗಿದೆ.

ಕೊಡಗಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ವಿರಾಜಪೇಟೆ ಹಾಗೂ ಕೇರಳದ ರಸ್ತೆ ಸಂಪರ್ಕ ಕಡಿದು ಹೋಗಿದೆ. ನದಿ ತುಂಬಿ ಹರಿಯುತ್ತಿರುವ ಪರಿಣಾಮ ಸೇತುವೆ ಮುಳುಗಿ ಹೋಗಿದೆ. ಖಾಸಗಿ ವಾಹನ, ಕೇರಳ ಸರಕಾರಿ ಬಸ್ಸುಗಳ ಮೇಲೆ ಮರಗಳು ಉರುಳಿ ಬಿದ್ದಿವೆ.

ಕಳಸ ಹಾಗೂ ಹೊರನಾಡು ಸಂಪರ್ಕ ಸೇತುವೆ ಮುಳುಗಡೆಯಾಗಿದ್ದು, ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯಕ್ಕೆ ತೆರಳುವು ಪ್ರವಾಸಿಗರಿಗೆ ರಸ್ತೆ ಸಂಪರ್ಕ ಇಲ್ಲದಂತಾಗಿದೆ. ವಾರಾಂತ್ಯದಲ್ಲಿ ಹೊರನಾಡು, ಶೃಂಗೇರಿ, ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ಮುಂತಾದ ತೀರ್ಥ ಕ್ಷೇತ್ರಗಳಿಗೆ ಪ್ರಯಾಣ ಬೆಳೆಸಲು ಉದ್ದೇಶಿಸಿರುವವರು ಕೆಲ ಸಮಯ ಮುಂದೂಡುವುದು ಒಳಿತು ಎನ್ನಲಾಗಿದೆ

Related Articles

Leave a comment

Back to Top

© 2015 - 2017. All Rights Reserved.