ಐಎಎಸ್ ಅಧಿಕಾರಿಗಳ ವರ್ಗಾವಣೆ

BREAKING NEWS, News, Regional, Top News No Comments on ಐಎಎಸ್ ಅಧಿಕಾರಿಗಳ ವರ್ಗಾವಣೆ 18
ಬೆಂಗಳೂರು : ರಾಜ್ಯ ಸರ್ಕಾರ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸೇರಿದಂತೆ ಹಲವು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಇಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆ ಕರೆದಿರುವ ಹಿನ್ನೆಲೆಯಲ್ಲಿ ಭಾನುವಾರವೇ ನೂತನ ಆದೇಶ ಹೊರಡಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿದ್ದ ಎಸ್ .ಪಾಲಯ್ಯ ಅವರನ್ನು ಕಾರ್ಮಿಕ ಇಲಾಖೆ ಆಯುಕ್ತರನ್ನಾಗಿ, ಯಾದಗಿರಿ ಜಿಲ್ಲಾಧಿಕಾರಿಯಾಗಿದ್ದ ಜೆ. ಮಂಜುನಾಥ್ ಅವರನ್ನು ಕೋಲಾರ ಜಿಲ್ಲಾಧಿಕಾರಿಯನ್ನಾಗಿ, ಎಂ.ಕೂರ್ಮರಾವ್ ಅವರನ್ನು ಯಾದಗಿರಿ ಜಿಲ್ಲಾಧಿಕಾರಿಯನ್ನಾಗಿ ಮತ್ತು ಅನಿರುದ್ಧ್ ಶ್ರವಣ್ ಅವರನ್ನು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಯನ್ನಾಗಿ, ಶಿವಮೊಗ್ಗ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದ ಡಾ.ರಾಕೇಶ್ ಕುಮಾರ್ ಅವರನ್ನು ತುಮಕೂರು ಜಿಲ್ಲಾಧಿಕಾರಿಯನ್ನಾಗಿ ವರ್ಗಾಯಿಸಲಾಗಿದೆ.
ಸವಣೂರು ಉಪವಿಭಾಗದ ಸಹಾಯಕ ಆಯುಕ್ತರಾಗಿದ್ದ ಮೊಹಮ್ಮದ್ ರೋಷನ್ ಅವರನ್ನು ಉತ್ತರ ಕನ್ನಡ ಜಿ.ಪಂ.ನ ಉಪ ಕಾರ್ಯದರ್ಶಿ- 2 ಸ್ಥಾನಕ್ಕೆ ವರ್ಗಾಯಿಸಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹುದ್ದೆಯ ಹೆಚ್ಚುವರಿ ಜವಾಬ್ದಾರಿ ನೀಡಲಾಗಿದೆ. ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆಯ ಆಯುಕ್ತರಾಗಿದ್ದ ಡಾ.ಎನ್. ಶಿವಶಂಕರ್ ಅವರನ್ನು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಮುಖ್ಯ ಕಾರ್ಯನಿರ್ವಹಣಾಧಿಕಾರಿಯನ್ನಾಗಿ, ಹೊಸಪೇಟೆಯ ಹಂಪಿ ವಿಶ್ವ ಪರಂಪರೆ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿದ್ದ ಕರಿಗೌಡ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯನ್ನಾಗಿ ಹಾಗೂ ಕೆಎಸ್‌ಆರ್‌ಟಿಸಿಯ (ಸಿಬ್ಬಂದಿ ಮತ್ತು ಪರಿಸರ) ನಿರ್ದೇಶಕ ಕೆ. ಶ್ರೀನಿವಾಸ್ ಅವರನ್ನು ಕರ್ನಾಟಕ ಕೊಳಚೆ ನಿರ್ಮೂಲನಾ ಮಂಡಳಿಯ ಆಯುಕ್ತರನ್ನಾಗಿ ವರ್ಗ ಮಾಡಲಾಗಿದೆ.

 

 

Related Articles

Leave a comment

Back to Top

© 2015 - 2017. All Rights Reserved.