ಪ್ರತ್ಯೇಕ ರಾಜ್ಯದ ಹೋರಾಟವನ್ನು ಖಂಡಿಸಿ ಅಖಂಡ ಕರ್ನಾಟಕ ಬಂದ್..!??

BREAKING NEWS, News, Regional, Top News No Comments on ಪ್ರತ್ಯೇಕ ರಾಜ್ಯದ ಹೋರಾಟವನ್ನು ಖಂಡಿಸಿ ಅಖಂಡ ಕರ್ನಾಟಕ ಬಂದ್..!?? 18
ಬೆಂಗಳೂರು : ಪ್ರತ್ಯೇಕ ರಾಜ್ಯದ ಹೋರಾಟ ಖಂಡಿಸಿ ಬೀದರ್‌ನಿಂದ ಚಾಮರಾಜನಗರದವರೆಗೆ ಪ್ರತಿಭಟನೆ ಮಾಡುವ ಕುರಿತು ಇಂದು ಸಭೆ ಸೇರಿ ಅಖಂಡ ಕರ್ನಾಟಕ ಬಂದ್ ಮಾಡುವ ಬಗ್ಗೆ ತೀರ್ಮಾನ ತೆಗೆದುಕೊಳ್ಳುವುದಾಗಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಕೂಗು ಖಂಡಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ಭಾನುವಾರ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಉತ್ತರ ಕರ್ನಾಟಕದ ಜೋಳದ ರೊಟ್ಟಿ ಮತ್ತು ದಕ್ಷಿಣ ಕರ್ನಾಟಕದ ರಾಗಿ ಮುದ್ದೆಯನ್ನು ಒಟ್ಟಿಗೆ ಊಟ ಮಾಡುವ ಮೂಲಕ ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಅಖಂಡ ಕರ್ನಾಟಕ ಇಬ್ಭಾಗವಾಗುವುದಕ್ಕೆ ಅವಕಾಶ ನೀಡುವುದಿಲ್ಲ. ಅಖಂಡ ಕರ್ನಾಟಕವನ್ನು ಒಡೆಯಲು ಅವಕಾಶ ನೀಡುವುದಿಲ್ಲ ಎಂದು ತಿಳಿಸಿದರು.

Related Articles

Leave a comment

Back to Top

© 2015 - 2017. All Rights Reserved.