ಕಪಿಲಾ ನದಿ ಪ್ರವಾಹ; ಮೈಸೂರು- ಊಟಿ ಸಂಪರ್ಕ ಕಡಿತ

BREAKING NEWS, News, Regional, Top News No Comments on ಕಪಿಲಾ ನದಿ ಪ್ರವಾಹ; ಮೈಸೂರು- ಊಟಿ ಸಂಪರ್ಕ ಕಡಿತ 34

ಮೈಸೂರು: ಕಪಿಲಾ ನದಿ ಪ್ರವಾಹ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಮೇಲೆ ನದಿ ಉಕ್ಕಿ ಹರಿಯುತ್ತಿದ್ದು, ಪರಿಣಾಮ ಮೈಸೂರು- ಊಟಿ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕಡಿತಗೊಂಡಿದೆ.

72 ಸಾವಿರ ಕ್ಯೂಸೆಕ್ ನೀರು ಕಬಿನಿ ಜಲಾಶಯದಿಂದ ಹೊರಹರಿಯುತ್ತಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 766ರಲ್ಲಿ ಸಂಪೂರ್ಣ ಸಂಚಾರ ಬಂದ್ ಆಗಿದ್ದು, ಪೊಲೀಸರು ಬದಲಿ ರಸ್ತೆ ಮೂಲಕ ವಾಹನ ಸವಾರರ ಮಾರ್ಗ ಬದಲಿಸುತ್ತಿದ್ದಾರೆ.

ಹಲವು ವರ್ಷಗಳ ನಂತರ ಕಪಿಲಾ ನದಿ ರಾಷ್ಟ್ರೀಯ ಹೆದ್ದಾರಿ ಮೇಲೆ ಉಕ್ಕಿ ಹರಿಯುತ್ತಿದೆ. ಹೆದ್ದಾರಿ ಸಂಪರ್ಕ ಕಡಿತದಿಂದ ವಾಹನ ಸವಾರರು ಪರದಾಡುತ್ತಿದ್ದಾರೆ. ಇದರಿಂದ ನಂಜನಗೂಡಿಗೆ ತೆರಳುವ ಭಕ್ತರಿಗೂ ಸಂಕಷ್ಟ ಎದುರಾಗಿದೆ. ನಂಜನಗೂಡು ದೇವಾಲಯದ ಸಮೀಪದ ಸ್ನಾನಘಟ್ಟ ಹಾಗೂ 16 ಕಾಲು ಮಂಟಪ ಸಹ ಸಂಪೂರ್ಣ ಮುಳುಗಡೆಯಾಗಿದೆ. ಜೊತೆಗೆ ಅಪಾಯದ ಮಟ್ಟ ಮೀರಿ ನದಿ ಹರಿಯುತ್ತಿದೆ.

ಮೈಸೂರಿನ ಕಬಿನಿ ಜಲಾಶಯದಿಂದ 74 ಸಾವಿರ ಕ್ಯೂಸೆಕ್ ನೀರು ಹೊರ ಬಿಟ್ಟಿರುವ ಕಾರಣ ಸುತ್ತೂರು ಶ್ರೀ ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸುತ್ತೂರು ಸೇತುವೆ ಸಂಪೂರ್ಣ ಮುಳುಗಡೆ ಆಗಿದೆ. ಅಲ್ಲದೆ ಸೇತುವೆ ಮೇಲೆ ನದಿ ನೀರು ತುಂಬಿ ಹರಿಯುತ್ತಿದೆ. ಇದರಿಂದ ಸೇತುವೆ ಸುತ್ತಮುತ್ತಲಿನ ನೂರಾರು ಎಕರೆ ಜಮೀನಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ.

Related Articles

Leave a comment

Back to Top

© 2015 - 2017. All Rights Reserved.