ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಯಾವುದೇ ಸಮಸ್ಯೆಯಿಲ್ಲ

News, Regional, Top News No Comments on ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಯಾವುದೇ ಸಮಸ್ಯೆಯಿಲ್ಲ 8

ಬೆಂಗಳೂರು: ನಡೆದಾಡುವ ದೇವರು ತುಮಕೂರಿನ ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಬಿಜಿಎಸ್ ಆಸ್ಪತ್ರೆಯ ವೈದ್ಯರ ತಂಡ ಸ್ಪಷ್ಟಪಡಿಸಿದೆ.

ಶ್ರೀಗಳು ಶನಿವಾರ ತಮ್ಮ ಆರೋಗ್ಯ ತಪಾಸಣೆಗಾಗಿ ಬೆಂಗಳೂರಿನ ಕೆಂಗೇರಿ ಬಳಿಯ ಬಿಜಿಎಸ್ ಆಸ್ಪತ್ರೆಗೆ ಬಂದಿದ್ದರು. 6 ತಿಂಗಳ ನಂತರ ಶ್ರೀಗಳು ಜನರಲ್ ಚೆಕಪ್‍ಗೆ ಬಂದು ದಾಖಲಾಗಿದ್ದರು.

ಡಾ. ರವೀಂದ್ರ ತಂಡ ಶ್ರೀಗಳ ಆರೋಗ್ಯ ತಪಾಸಣೆ ನಡೆಸಿ ಏನೂ ಸಮಸ್ಯೆ ಇಲ್ಲ ಎಂದು ತಿಳಿಸಿದ್ದಾರೆ. ಇಂದು ಬೆಳಗ್ಗೆ 5.30ರ ಸುಮಾರಿಗೆ ಎದ್ದಿರುವ ಶ್ರೀಗಳು, ಎಂದಿನಂತೆ ಲವಲವಿಕೆಯಿಂದ ಪೂಜೆ ಮಾಡಿದ್ದಾರೆ. ಮಧ್ಯಾಹ್ನದ ವೇಳೆಗೆ ಬಿಜಿಎಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆಗಳಿವೆ.

ಶ್ರೀಗಳ ಜೊತೆ ಕಿರಿಯ ಶ್ರೀ ಸಿದ್ಧಲಿಂಗ ಸ್ವಾಮೀಜಿ ಹಾಗೂ ಕಣ್ಣೂರು ಸ್ವಾಮೀಜಿ ಆಗಮಿಸಿದ್ದು, ವೈದ್ಯಕೀಯ ವರದಿ ಬಳಿಕ ವೈದ್ಯರ ಸಲಹೆ ಮೇರೆಗೆ ಮಠಕ್ಕೆ ವಾಪಸ್ ಕರೆ ತರಲಾಗುವುದು ಎಂದು ನಿನ್ನೆ ಮಾಧ್ಯಮಗಳಿಗೆ ತಿಳಿಸಿದ್ದರು.

ಪೊಲೀಸ್ ಬೆಂಗಾವಲಿನಲ್ಲಿ ಶ್ರೀಗಳನ್ನು ಕೆಂಗೇರಿ ಬಿಜಿಎಸ್ ಆಸ್ಪತ್ರೆಗೆ ಕರೆ ತರಲಾಗಿತ್ತು. ಕಳೆದ ಜೂನ್ ನಲ್ಲಿ 5 ಸ್ಟಂಟ್ ಗಳನ್ನು ಅಳವಡಿಸಲಾಗಿತ್ತು. ಬಳಿಕ 3 ಸ್ಟಂಟ್ ಅಳವಡಿಸಲಾಗಿತ್ತು. ಇದರಿಂದ 6 ತಿಂಗಳಿಗೆ ಒಮ್ಮೆ ತಪಾಸಣೆಗೆ ನಡೆಸಲಾಗುತ್ತದೆ ಎಂದು ವೈದ್ಯರು ಮಾಹಿತಿ ನೀಡಿದ್ದರು. ಹೀಗಾಗಿ ನಿನ್ನೆ ಮಧ್ಯಾಹ್ನ 3 ಗಂಟೆಗೆ ತುಮಕೂರಿನಿಂದ ಹೊರಟ ಶ್ರೀಗಳು ಆಸ್ಪತ್ರೆಗೆ ಆಗಮಿಸಿದ್ದರು. ಈ ವೇಳೆ ಆಸ್ಪತ್ರೆಯ ಒಳಗೆ ತೆರಳಲು ವೀಲ್ಹ್ ಚೇರ್ ನಲ್ಲಿ ಕುಳಿತುಕೊಳ್ಳಲು ನಿರಾಕರಿಸಿ ತಾವೇ ನಡೆದುಕೊಂಡು ತೆರಳಿದ್ದರು.

Related Articles

Leave a comment

Back to Top

© 2015 - 2017. All Rights Reserved.