ವರ್ಷದ ಮೊದಲ ಹಬ್ಬ, ಸಮೃದ್ಧಿಯ ಸಂಕೇತ ಸಂಕ್ರಾಂತಿ
ಸಂಕ್ರಾಂತಿ ವಿಶೇಷವಾದ ಹಬ್ಬ. ಇದು ವರ್ಷದ ಮೊದಲ ಹಬ್ಬವೂ ಹೌದು. ಅನಾದಿ ಕಾಲದಿಂದ ನಡೆದುಕೊಂಡು ಬರುತ್ತಿರುವ ಶಾಸ್ತ್ರ ಸಂಪ್ರದಾಯಗಳ ಪ್ರಕಾರ ಸೂರ್ಯನು ಧನು ರಾಶಿಯಿಂದ ಮಕರ ರಾಶಿಯನ್ನು ಪ್ರವೇಶಿಸುವುದನ್ನೇ ಮಕರ ಸಂಕ್ರಾಂತಿ ಎಂದು ಕರೆಯಲಾಗುತ್ತದೆ. ಈ ಹಬ್ಬದ ಸಮಯದಲ್ಲಿ ಶುಭಕಾರ್ಯಗಳನ್ನು ಕೈಗೊಳ್ಳುವುದು ಶುಭಕರ.
ಸಂಕ್ರಾಂತಿ ಮುಖ್ಯವಾಗಿ ದಕ್ಷಿಣ ಭಾರತದಲ್ಲಿ ಆಚರಿಸಲಾಗುವ ಒಂದು ಹಬ್ಬ. ಪೈರು ತೆಗೆಯುವ ಸಂದರ್ಭದಲ್ಲಿ ಆಚರಿಸಲಾಗುವ ಸಂಕ್ರಾಂತಿ ಹಬ್ಬ ಸಮೃದ್ಧಿಯ ಸಂಕೇತ. ಕರ್ನಾಟಕ, ಆಂಧ್ರ ಪ್ರದೇಶ ಮತ್ತು ತಮಿಳುನಾಡುಗಳ ಮುಖ್ಯ ಹಬ್ಬಗಳಲ್ಲಿ ಸಂಕ್ರಾಂತಿಯೂ ಒಂದು. ಇನ್ನು ಈ ಹಬ್ಬವನ್ನು ಕನ್ನಡನಾಡಿನಲ್ಲಿ ಮತ್ತು ಆಂಧ್ರಪ್ರದೇಶದಲ್ಲಿ ಸಂಕ್ರಾಂತಿ ಎಂದು ಆಚರಿಸಿದರೆ, ತಮಿಳುನಾಡಿನಲ್ಲಿ ಪೊಂಗಲ್ ಎಂದು ಆಚರಿಸುತ್ತಾರೆ.
ಆಚರಣೆಯ ಹಿನ್ನೆಲೆ
ಎಲ್ಲಾ ಚಟುವಟಿಕೆಗಳಿಗು ಆಧಾರಪ್ರಾಯವಾದ ಸೂರ್ಯನು ಒಂದು ರಾಶಿಯಿಂದ ಮತ್ತೊಂದು ರಾಶಿಗೆ ಪ್ರವೇಶಿಸುವ ಕಾಲವನ್ನು “ಸಂಕ್ರಮಣ ಅಥವಾ ಸಂಕ್ರಾಂತಿ” ಎಂದು ಜ್ಯೋತಿಷ್ಯಾಧಾರದ ಮೇಲೆ ಪರಿಗಣಿಸಲಾಗುವುದು. ಸಂಕ್ರಾಂತಿಯು ಒಂದು ವಿಧದಲ್ಲಿ ಸೂರ್ಯನ ಆರಾಧನೆಯಾಗಿದ್ದು, ಉತ್ತರಾಯಣ ದಕ್ಷಿಯಾಣಗಳ ಪ್ರಾರಂಭದ ದಿನವಾದ್ದರಿಂದ ಹೆಚ್ಚಿನ ಮಾಹತ್ವವನ್ನು ಪಡೆದಿದೆ. ಸಾಮಾನ್ಯವಾಗಿ ಸುಗ್ಗಿಯ ಸಂದರ್ಭದಲ್ಲಿ ಆಚರಿಸುವ ಸಂಕ್ರಾಂತಿ ಹಬ್ಬವು ಭಾರತೀಯ ಕಾಲಮಾನ ‘ಪುಷ್ಯಮಾಸದಲ್ಲಿ’ ಬರುವುದು. ಉತ್ತರಾಯಣದ ಪುಣ್ಯಕಾಲವೆಂದೂ(ದೇವತೆಗಳ ಕಾಲವೆಂದೂ) ಸಹ ಕರೆಯಲಾಗುತ್ತದೆ. ಈ ಹಬ್ಬದ ಸಂದರ್ಭದಲ್ಲಿ ಭಕ್ತರು ಪುಣ್ಯ ನದಿಗಳೆಂದು ಹೆಸರುವಾಸಿಯಾದ ಗಂಗಾ, ಕಾವೇರಿ ಮೊದಲಾದವುಗಳಲ್ಲಿ ಸ್ನಾನ ಮಾಡುವುದು ಉಂಟು. ಸೂರ್ಯನು ಈವರೆಗೆ ದಕ್ಷಿಣದತ್ತ ವಾಲಿ ಚರಿಸುತ್ತಿದ್ದದ್ದು, ಸಂಕ್ರಾಂತಿಯ ದಿನದಿಮ್ದ ಉತ್ತರದ ಕಡೆ ಪಥ ಬದಲಾಯಿಸುತ್ತಾನೆ. ಈ ರೀತಿ ಸೂರ್ಯನ ಪಥ ಬದಲಾವಣೆಯಿಂದ ಭಾರತದಲ್ಲಿ ಕೊರೆಯುವ ಚಳಿ ಕಡಿಮೆಯಾಗಿ ಹಗಲು ಹೆಚ್ಚು ಸಂಭವಿಸುತ್ತದೆ ಎಂಬ ಪ್ರತೀತಿ ಇದೆ.
ಶಾಸ್ತ್ರದೃಷ್ಟಿಯಿಂದ ಈ ಹಬ್ಬದಂದು ಕಪ್ಪು ಎಳ್ಳಿನಿಂದ ಸ್ನಾನ ಮಾಡಿ ಬ್ರಾಹ್ಮಣರಿಗೆ ಎಳ್ಳುದಾನವನ್ನು ಮಾಡುತ್ತಾರೆ. ಈ ದಿನ ಮಾಡಿದ ದಾನದಿಂದ ಸೂರ್ಯನು ಆಜನ್ಮ ಪರ್ಯಂತ ಅನುಗ್ರಹಿಸುತ್ತಾನೆಂಬ ನಂಬಿಕೆಯು ಇದೆ. ಆಂದ್ರ, ತಮಿಳು ನಾಡುಗಳಲ್ಲಿ ಸಂಕ್ರಾಂತಿ, ಕನು, ಭೋಗಿ ಎಂದು ಆಚರಿಸಲ್ಪಡುತ್ತದೆ. ಅಲಹಾಬಾದಿನಲ್ಲಿ ಈ ಸಂದರ್ಭದಲ್ಲಿ ಕುಂಭ ಮೇಳ ನಡೆಯುವುದನ್ನು ಕಾಣಬಹುದು. ಉತ್ತರ ಭಾರತದಲ್ಲಿಯೂ ಸಂಕ್ರಾಂತಿಯನ್ನು ಆಚರಿಸುವುದುಂಟು.
ಆಚರಣೆ: ಸಂಕ್ರಾಂತಿ ಹಬ್ಬದ ಹಿಂದಿನ ದಿನ ಭೋಗಿ ಹಬ್ಬ. ಅಂದು ಹಳೆಯದನ್ನು ತೊರೆದು ಹೊಸದನ್ನು ಪಡೆದು ಸಂತೋಷ ಪಡುವ ಸಡಗರ. ಮನೆಯನ್ನು ಶುದ್ಧಿಗೊಳಿಸುವುದು, ಮನೆ ಮಂದಿಯೆಲ್ಲಾ ಎಣ್ಣೆ ಸ್ನಾನ ಮಾಡಿ ನೂತನ ವಸ್ತ್ರಗಳನ್ನು ಧರಿಸುವುದು, ಮೂರನೆಯ ದಿನ ಹೊಸ ಫಸಲನ್ನು ಉಂಡು ಸಂತೋಷಪಡಲು ಎಲ್ಲಾ ಸನ್ನದ್ಧತೆ ನಡೆಸುತ್ತಾರೆ. ಮನೆಯ ಮುಂದೆ ವಿವಿಧ ರೀತಿಯಲ್ಲಿ ಬಣ್ಣ ಬಣ್ಣದ ರಂಗೋಲಿಯಿಂದ ಅಲಂಕಾರ. ಮಾಡಲಾಗುತ್ತದೆ.
ಸೂರ್ಯನು ಮಕರ ಸಂಕ್ರಾಂತಿಯಂದು ಮಕರ ರಾಶಿಯನ್ನು ಪ್ರವೇಶ ಮಾಡುತ್ತಾನೆ. ಆದ್ದರಿಂದಲೇ ಉತ್ತರ ಭಾರತದಲ್ಲಿ ಈ ಹಬ್ಬಕ್ಕೆ ಮಕರ ಸಂಕ್ರಾಂತಿಯೆಂದು ಹೆಸರು. ಕರ್ನಾಟಕ, ಆಂಧ್ರ, ಮಹಾರಾಷ್ಟ್ರ ಈ ದೇಶಗಳಲ್ಲಿಯೂ ಇದನ್ನು ಹೆಚ್ಚಾಗಿ ಮಕರ ಸಂಕ್ರಾಂತಿಯೆಂದೇ ಆಚರಿಸುತ್ತಾರೆ. ಈ ದಿನ ತಮಗೆ ವರ್ಷವಿಡೀ ಧನ, ಧಾನ್ಯ, ಅಭಿವೃದ್ಧಿಯನ್ನು ಮಾಡಿದ ಸೂರ್ಯನಿಗೆ ಮತ್ತು ಭೂಮಿಗೆ ಹಾಗೂ ವ್ಯವಸಾಯದಲ್ಲಿ ಸಹಾಯಕವಾಗಿ ನಿಂತು ನೆರವು ನೀಡಿದ ದನಕರುಗಳಿಗೆ ಗೌರವ ನೀಡುವ ಹಬ್ಬ.
ಎಳ್ಳು ಬೆಲ್ಲ ಹಂಚುವಿಕೆ
ಕರ್ನಾಟಕದಲ್ಲಿ ಮುಖ್ಯವಾಗಿ ಎಳ್ಳು, ಬೆಲ್ಲ ಮುಂತಾದವುಗಳನ್ನು ಮಿಶ್ರ ಮಾಡಿ ಊರಿನಲ್ಲೆಲ್ಲಾ ಹಂಚುವುದು. ಇದರೊಂದಿಗೆ ಹೊಸ ಬೆಳೆ, ಕಬ್ಬು, ಎಲಚಿಕಾಯಿ ಮುಂತಾದವುಗಳನ್ನು ಸೇರಿಸಿ ಎಲ್ಲರಿಗೂ ನೀಡಿ ಸಂತೋಷಪಡುವುದಾಗಿದೆ. ಎಳ್ಳು ಬೆಲ್ಲವನ್ನು ಹಂಚುವ ಸಂಪ್ರದಾಯ ಬಹಳ ಮಹತ್ವ ಪಡೆದಿದೆ. ಬೇರೆ ದಿನಗಳಲ್ಲಿ ಎಳ್ಳನ್ನು ಬೇರೆಯವರಿಗೆ ಕೊಡುವುದಾಗಲೀ ಅವರಿಂದ ಪಡೆಯುವುದಾಗಲೀ ಶುಭಕರವಲ್ಲ. ಎಳ್ಳು ಧಾನ್ಯ ಏನಿದ್ದರೂ ಋಣಾನುಬಂಧದ ಸಂಕೇತವಾಗಿರುವುದರಿಂದ ಅದನ್ನು ನೆಂಟರಿಷ್ಟರೆಲ್ಲರಿಗೂ ಆ ದಿನ ಹಂಚುವುದು ಮುಖ್ಯವಾಗಿ ಬಾಂಧವ್ಯ ನಿರಂತರವಾಗಿರಲಿ ಎಂಬುದರ ಸಂಕೇತ. ಆದ್ದರಿಂದಲೇ ಎಳ್ಳು ಬೆಲ್ಲ ತಿಂದು ಒಳ್ಳೆಯ ಮಾತನಾಡಿ ಎಂಬುದನ್ನು ಆ ದಿನ ಕೇಳುತ್ತೇವೆ.
ಸುಗ್ಗಿಯ ಹಬ್ಬ
ಸಂಕ್ರಾಂತಿ ಮುಖ್ಯವಾಗಿ ಸುಗ್ಗಿಯ ಹಬ್ಬ. ಧವಸ, ಧಾನ್ಯ ಬೆಳೆಯಲು ಸಹಾಯಕವಾದ ರೈತನ ಸ್ನೇಹಿತ ದನಕರುಗಳಿಗೂ ಆ ದಿನ ರೈತ ಕೃತಜ್ಞತೆಯನ್ನು ಸಲ್ಲಿಸುತ್ತಾನೆ. ದನಕರುಗಳನ್ನು ವಿಶೇಷವಾಗಿ ಸಿಂಗರಿಸುತ್ತಾರೆ. ಕೊಂಬುಗಳನ್ನು ಶುಭ್ರಗೊಳಿಸಿ ವಿಶೇಷ ಬಣ್ಣಗಳಿಂದ ಅಲಂಕರಿಸುತ್ತಾರೆ. ಕಬ್ಬು, ಬೆಲ್ಲ, ಬಾಳೆಹಣ್ಣು, ಮನೆಯಲ್ಲಿ ಮಾಡಿದ ವಿಶೇಷ ತಿನಿಸುಗಳನ್ನು ಅವುಗಳಿಗೆ ತಿನ್ನಿಸುತ್ತಾರೆ. ವೈಭವದ ಮೆರವಣಿಗೆಯಲ್ಲಿ ಅವುಗಳನ್ನು ಊರೆಲ್ಲಾ ತಿರುಗಾಡಿಸುತ್ತಾರೆ. ವರ್ಷವಿಡೀ ರೈತನೊಂದಿಗೆ ಬಿಡುವಿಲ್ಲದೆ ದುಡಿದ ಆ ಪ್ರಾಣಿಗಳಿಗೆ ಒಂದೆರಡು ದಿನಗಳು ವಿರಾಮವೂ ಈಗ ದೊರೆಯುತ್ತದೆ. ಹೀಗೆ ಸಂಕ್ರಾಂತಿಯ ಸಂಭ್ರಮ ನಾಡಿನ ಎಲ್ಲಾ ಭಾಗಗಳಲ್ಲಿಯೂ ಕಂಡು ಬರುತ್ತದೆ.
All the best and do your best.. Be positive with optimistic approach to your work then surely you will get succeed in your career with your hard work that to with lot of passion towards your work… So all the best.. Go ahead.. May god bless you with more power to strengthen you and gave u much power to solve your problems…
Super ,,,,,,
All the best for your future …Good Article…..
All the best pinky