ಮೋದಿ ಮುಡಿಗೆ ಮತ್ತೊಂದು ಕಿರೀಟ!
ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗಷ್ಟೇ ತಮ್ಮ ವಿದೇಶ ಪ್ರವಾಸದಲ್ಲಿ ಈಜಿಪ್ಟ್ ದೇಶದಲ್ಲಿ ಅತ್ಯುನ್ನತ ನಾಘರಿಕ ಪ್ರಶಸ್ತಿ ಪಡೆದಿದ್ದರು. ಕಳೆದ ತಿಂಗಳು ಜೂನ್ 25 ರಂದು ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಅವರು ಈಜಿಪ್ಟ್ನ ಅತ್ಯುನ್ನತ ‘ಆರ್ಡರ್ ಆಫ್ ದಿ ನೈಲ್’ ಪ್ರಶಸ್ತಿ ಪ್ರದಾನ ಮಾಡಿದ್ದರು. ಇದರ ಬೆನ್ನಲೇ ಮೋದಿ ಮತ್ತೊಂದು ಗರಿಮೆಗೆ ಪಾತ್ರರಾಗಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 1 ರಂದು “ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿ” ಸ್ವೀಕರಿಸಲಿದ್ದಾರೆ. ತಮ್ಮ ಸರ್ವೋಚ್ಚ ನಾಯಕತ್ವದ ಮೂಲಕ ದೇಶದ ಜನರಲ್ಲಿ ದೇಶಭಕ್ತಿಯ ಭಾವನೆಯನ್ನು ಜಾಗೃತಗೊಳಿಸಿದ ಆ ಹಿನ್ನೆಲೆಯಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ.
ಲೋಕಮಾನ್ಯ ತಿಲಕರ 103ನೇ ಪುಣ್ಯತಿಥಿಯಂದು, ಅಂದರೆ ಆಗಸ್ಟ್ 1 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪ್ರಶಸ್ತಿ ನೀಡಲಾಗುತ್ತಿದ್ದು. ತಿಲಕ್ ಸ್ಮಾರಕ ಮಂದಿರ ಟ್ರಸ್ಟ್ (ಹಿಂದ್ ಸ್ವರಾಜ್ ಸಂಘ) ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿಯನ್ನು ಪ್ರದಾನ ಮಾಡಲಿದೆ. ಆತ್ಮನಿರ್ಭರ್ ಭಾರತ್ ಪರಿಕಲ್ಪನೆಯಡಿ ಪ್ರಧಾನ ಮಂತ್ರಿಯವರ ಸರ್ವೋಚ್ಚ ನಾಯಕತ್ವದಲ್ಲಿ ಭಾರತವು ಪ್ರಗತಿಯ ಶಿಖರ ಏರಿದೆ ಎಂದು ಸಂಘಟಕರು ಅಭಿಪ್ರಾಯಪಟ್ಟಿದ್ದಾರೆ.