ಹಠವಾದಿ ಸಿದ್ದರಾಮಯ್ಯ ಹೆಡೆಮುರಿ ಕಟ್ಟುತ್ತಾ ಸಿಬಿಐ!?
ಮುಡಾ ಅಕ್ರಮದಲ್ಲಿ ಭಾಗಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗ ತಮ್ಮ ರಾಜಕೀಯ ಬದುಕಿನ ಅತ್ಯಂತ ಮಹತ್ತರವಾದ ಘಟ್ಟದಲ್ಲಿದ್ದಾರೆ. ಮೂಡಾ ಹಗರಣ ಸಿದ್ದರಾಮಯ್ಯ ಅವರನ್ನು ಬಲಿತೆಗೆದುಕೊಳ್ಳುವ ಎಲ್ಲಾ ಲಕ್ಷಣಗಳು ಎದ್ದು ಕಾಣುತ್ತಿವೆ. ರಾಜ್ಯಪಾಲರ ಪ್ರಾಸಿಕ್ಯೂಷನ್ ನಿರ್ಧಾರವನ್ನು ಹೈಕೋರ್ಟ್ ಕೂಡಾ ಎತ್ತಿ ಹಿಡಿದಿದೆ, ಎಫ್ಐರ್ ದಾಖಲಿಸುವಂತೆ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶಿಸಿದೆ, ಲೋಕಾಯುಕ್ತದಲ್ಲಿ ಎಫ್ಐಆರ್ ಕೂಡ ದಾಖಲಾಗಿದೆ.
ಆದರೆ ಸಿದ್ದರಾಮಯ್ಯ ಮಾತ್ರ ತಮ್ಮ ಮುಂಡುವಾದವನ್ನು ಮುಂದುವರೆಸಿ ರಾಜೀನಾಮೆ ನೀಡುವ ಪ್ರಮೇಯವೇ ಇಲ್ಲ ಎಂದು ಖಡಕಂಡಿತವಾಗಿ ಹೇಳುತ್ತಿದ್ದಾರೆ. ಈ ನಡುವೆ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದ ಬದಲು ಸಿಬಿಐ ತನಿಖೆಗೆ ಅರ್ಜಿ ಸಲ್ಲಿಕೆಯಾಗಿದೆ.
ಮುಡಾ ಭೂ ಹಗರಣ ಪ್ರಕರಣದ ಅರ್ಜಿದಾರರಲ್ಲಿ ಒಬ್ಬರಾದ ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು, ಸಿಬಿಐ ತನಿಖೆಗೆ ಒತ್ತಾಯಿಸಿದ್ದಾರೆ. ಹೈಕೋರ್ಟ್ ಸೋಮವಾರ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಳ್ಳುವ ಸಾಧ್ಯತೆ ಇದೆ. ಲೋಕಾಯುಕ್ತರು ಪಾರದರ್ಶಕ ತನಿಖೆ ನಡೆಸುತ್ತಾರೆ ಎಂದು ನನಗೆ ಅನಿಸುವುದಿಲ್ಲ. ಆದ್ದರಿಂದ ಮುಡಾ ಭೂ ಹಗರಣದ ಪ್ರಕರಣದ ತನಿಖೆಯನ್ನು ಸಿಬಿಐ ನಡೆಸಬೇಕು ಎಂದು ಸ್ನೇಹಮಯಿ ಕೃಷ್ಣ ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.
ಒಂದೊಮ್ಮೆ ಮುಡಾ ಪ್ರಕರಣದಲ್ಲಿ ನ್ಯಾಯಾಲಯದ ಅನುಮತಿಯಂತೆ ಸಿಬಿಐ ಎಂಟ್ರಿಯಾದಲ್ಲಿ ಈ ಪ್ರಕರಣದ ದಿಕ್ಕು ಬದಲಾಗಿದೆ. ಸಿಬಿಐ ತನಿಖೆ ವಹಿಸಿಕೊಂಡರೆ ಇದುವರೆಗೆ ಹಠವಾದಿಯಂತೆ ವರ್ತಿಸುತ್ತಿರುವ ಸಿದ್ದರಾಮಯ್ಯ ಅವರ ಆತ್ಮವಿಶ್ವಾಸವೇ ಕುಗ್ಗಿ ಹೋಗಲಿದೆ. ಬೆನ್ನಿಗೆ ನಿಂತಿರುವ ಹೈಕಮಾಂಡ್ ಜಂಘಾಬಲವೇ ಬೈ ಕುಸಿಯಲಿದೆ, ಅಲ್ಲದೆ ಈಗ ಮುಖ್ಯಮಂತ್ರಿಗಳ ಪರ ನಿಂತಿರುವ ಕಾಂಗ್ರೆಸ್ ಶಾಸಕರು ಚದುರಿ ಹೋಗಲಿದ್ದಾರೆ.
ಲೋಕಾಯುಕ್ತ ತನಿಖೆ ರಾಜ್ಯ ಸರ್ಕಾರದ ನಿಯಂತ್ರಣದಲ್ಲಿರುವುದರಿಂದ ನಿಶ್ಚಿತವಾಗಿಯೂ ಮುಖ್ಯಮಂತ್ರಿಗಳ ಪ್ರಭಾವ ಇದ್ದೇ ಇರುತ್ತದೆ. ಆದರೆ ಸಿಬಿಐ ಸ್ವತಂತ್ರ ಸಂಸ್ಥೆ, ಅಲ್ಲಿ ರಾಜ್ಯ ಸರ್ಕಾರದ ಹಸ್ತಕ್ಷೇಪಗಳು ನಡೆಯಲು ಅಸಾಧ್ಯ. ಹೀಗಾಗಿ ಸಿಬಿಐ ತನಿಖೆ ನಡೆದರೆ ಸಿದ್ದರಾಮಯ್ಯ ಅವರು ಬಂಧನಕ್ಕೊಳಗಾಗಿ ಜೈಲು ಸೇರುವುದು ನಿಶ್ಚಿತವಾಗಲಿದೆ, ಹೈಕೋರ್ಟ್ ಅನುಮತಿಸಬೇಕಷ್ಟೇ.