ಗೃಹಣಿಯರಿಗೆ ಶಾಕಿಂಗ್ ನ್ಯೂಸ್ – ಪ್ರತೀ ತಿಂಗಳ ಗೃಹಲಕ್ಷ್ಮಿ ಬಂದ್

ಕರ್ನಾಟಕದ ಗೃಹಲಕ್ಷ್ಮಿಯರಿಗೆ ಶಾಕಿಂಗ್ ಸುದ್ದಿ ಎದುರಾಗಿದ್ದು ಇನ್ನು ಮುಂದೆ ಪ್ರತೀ ತಿಂಗಳು ಗೃಹಲಕ್ಷ್ಮಿ ಹಣ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಹೌದು ಮಾಧ್ಯಮಗಳೊಂದಿಗೆ ಮಾತನಾಡುತ್ತಾ ಈ ಕುರಿತು ಹೇಳಿದ್ದಾರೆ.
ಮೂರು ನಾಲ್ಕು ತಿಂಗಳ ಗೃಹಲಕ್ಷ್ಮಿ ಹಣ ಇನ್ನೂ ಬಂದಿಲ್ಲ, ಯಾವಾಗ ಬರುತ್ತೆ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ “ನೋಡ್ರಿ ತಿಂಗಳು ತಿಂಗಳು ಗೃಹಲಕ್ಮ್ಷಿ ಹಣ ಕೊಡ್ತೀವಿ ಅಂತ ನಾವು ಎಂದೂ ಹೇಳಿಲ್ಲ. ನೀವು ಟ್ಯಾಕ್ಸ್ ಕಟ್ತಾ ಇರ್ಬೇಕು, ನಾವು ದುಡ್ಡು ಕೊಡ್ತಾ ಇರಬೇಕು” ಎಂಬ ಹಾರಿಕೆ ಉತ್ತರ ನೀಡಿದ್ದಾರೆ.
ಈ ಮೂಲಕ ಪ್ರತೀ ತಿಂಗಳು ಗೃಹಲಕ್ಷ್ಮಿ ಹಣ ನೀಡುವುದಿಲ್ಲ ಎಂಬ ಪರೋಕ್ಷ ಸುಳಿವನ್ನು ರಾಜ್ಯದ ಉಪಮುಖ್ಯಮಂತ್ರಿಗಳು ನೀಡಿದ್ದಾರೆ. ಡಿಕೆಶಿ ಹೇಳಿಕೆ ವಿರುದ್ಧ ಸಿಟ್ಟಾಗಿರುವ ರಾಜ್ಯದ ಗೃಹಿಣಿಯರು, ಬರು ಬರುತ್ತಾ ಕಾಂಗ್ರೆಸ್ ಗ್ಯಾರಂಟಿಗಳು ಸುಳ್ಳಾಗುತ್ತಿವೆ, ಗ್ಯಾರಂಟಿ ಹೆಸರಿನಲ್ಲಿ ಅಧಿಕಾರಕ್ಕೆ ಬಂದವರು ಬೆಲೆ ಏರಿಕೆ ಮಾಡಿ ಬಡವರನ್ನು ಲೂಟಿ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.