Latest Newsರಾಜಕೀಯ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ಧಾರ್ಮಿಕ ಹಬ್ಬಗಳನ್ನು ಹತ್ತಿಕ್ಕಲು ಕಾಂಗ್ರೆಸ್‌ ಯತ್ನ : ಬಿಜೆಪಿ ಸರ್ಕಾರವೇ ಆದೇಶ ಹೊರಡಿಸಿತ್ತು ಎನ್ನುತ್ತಿರುವ ಕಾಂಗ್ರೆಸ್‌, ವಾಸ್ತವವೇನು? ಇಲ್ಲಿದೆ ಸಂಪೂರ್ಣ ಮಾಹಿತಿ.

Share News

ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳ ಆವರಣದಲ್ಲಿ ಶೈಕ್ಷಣಿಕ ಚಟುವಟಿಕೆಗಳನ್ನು ಹೊರತು ಪಡಿಸಿ ಶಾಲಾ-ಕಾಲೇಜು (School and college grounds) ಆವರಣದಲ್ಲಿ ಖಾಸಗಿ ಕಾರ್ಯಕ್ರಮಗಳಿಗೆ (Private event) ಅನುಮತಿ ನೀಡಬಾರದು ಎಂದು ದಕ್ಷಿಣ ಕನ್ನಡ (Dakshina Kannada) ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದರು.

ಡಿಡಿಪಿಐಯವರ ಸುತ್ತೋಲೆಯ ವಿರುದ್ಧ ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ ಪ್ರಥಮತವಾಗಿ ಖಂಡಿಸಿದ್ದರು. ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ಧೋರಣೆ ಅನುಸರಿಸುತ್ತಿದೆ. ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರ ಹಿಂದೂ ವಿರೋಧಿ ನೀತಿಯನ್ನು ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಷ್ಠಾನಗೊಳಿಸುತ್ತಿದ್ದಾರೆ ಎಂದು ಹೇಳಿಕೆ ಕೂಡಾ ನೀಡಿದ್ದರು. ಇದರ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾ ಕೂಡಾ ಜಿಲ್ಲಾವ್ಯಾಪಿ ಪ್ರತಿಭಟನೆ ನಡೆಸಿತ್ತು.

ಆದರೆ ಇದೀಗ, ಶಿಕ್ಷಣ ಸಂಸ್ಥೆ ಹಾಗೂ ಅದರ ಮೈದಾನಗಳಲ್ಲಿ ಧಾರ್ಮಿಕ ಕಾರ್ಯಕ್ರಮ ನಿಷೇಧಿಸಿ ಆದೇಶ ಹೊರಡಿಸಿದ್ದೇ ಬಿಜೆಪಿ ಸರ್ಕಾರ. 2013 ರಲ್ಲಿ ಜಗದೀಶ್ ಶೆಟ್ಟರ್ ಸಿಎಂ ಆಗಿದ್ದಾಗ ಬಿಜೆಪಿ ಸರ್ಕಾರ ಈ ಆದೇಶ ಹೊರಡಿಸಿತ್ತು. ಇದೇ ಆದೇಶದ ಅನ್ವಯ ದ.ಕ. ಡಿಡಿಪಿಐಯವರು ಸುತ್ತೋಲೆ ಹೊರಡಿಸಿದ್ದರು ಎಂದು ಹಳೆಯ ಸುತ್ತೋಲೆಯನ್ನು ಶೆರ್‌ ಮಾಡಿಕೊಂಡು ಕಾಂಗ್ರೆಸ್‌ ಅವಧಿಯ ಸುತ್ತೋಲೆಯನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ.

ಆದರೆ ಬಿಜೆಪಿ ಸರ್ಕಾರದಲ್ಲಿ ಜಗದೀಶ್‌ ಶೆಟ್ಟರ್‌ ಅವಧಿಯಲ್ಲಿ ಹೊರಡಿಸಲಾಗಿದ್ದ ಆದೇಶ ಕೇವಲ ಒಂದು ಶಾಲೆಗೆ ಮಾತ್ರ ಸೀಮಿತವಾಗಿತ್ತು, ಅದೂ ಕೂಡಾ ದೂರು ಬಂದ ಹಿನ್ನಲೆಯಲ್ಲಿ ಅವಕಾಶ ನಿರಾಕರಿಸಿ ಆದೇಶ ಹೊರಡಿಸಲಾಗಿತ್ತು.

ಬೆಂಗಳೂರಿನ ವ್ಯಾಪ್ತಿಯ ಸರ್ಕಾರಿ ಪ್ರೌಢಶಾಲೆ, ಚಾಮರಾಜನಗರ ಇಲ್ಲಿನ ಮೈದಾನದಲ್ಲಿ ರಾಜಕೀಯ ಸಮಾವೇಶ ಮಾಡಿ ಸಂಘಟಕರು ಯಾವುದೇ ಶುಚಿತ್ವ ಮಾಡದೆ, ಶಾಲೆಯ ಮೈದಾನದಲ್ಲಿ ಗಲೀಜು ಮಾಡಿದ್ದರು. ಈ ಬಗ್ಗೆ ಶಾಲೆಗೆ, ಶಿಕ್ಷಣ ಇಲಾಖೆಗೆ ಸಾರ್ವಜನಿಕರಿಂದ ದೂರು ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಮುಂದಿನ ದಿನಗಳಲ್ಲಿ ಶಾಲಾ ಕಾಲೇಜು ಆವರಣದಲ್ಲಿ ಶೈಕ್ಷಣಿಕ ವಿಚಾರಕ್ಕೆ ಸಂಭದಪಡದ ಯಾವುದೇ ಕಾರ್ಯಕ್ರಮ ನಡೆಸಬಾರದು ಎಂದು ಸುತ್ತೋಲೆ ಹೊರಡಿಸಿತ್ತು.

ಇದು ಸರ್ಕಾರಿ ಪ್ರೌಢ ಶಾಲೆ, ಕೋಟೆ ಇಲ್ಲಿಗೆ ಸಂಬಂಧಪಟ್ಟಿರುವಂತಹ ಆದೇಶವಾಗಿತ್ತು. ಇದನ್ನು ದುರುಪಯೋಗಪಡಿಸಿಕೊಂಡಿರುವ ಕಾಂಗ್ರೆಸ್‌ ನಾಯಕರು ಅಧಿಕಾರಿಗಳ ಮೇಲೆ ಒತ್ತಡ ಹೇರಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳ ಆವರಣಗಳಲ್ಲಿ ಹಿಂದೂ ಧಾರ್ಮಿಕ ಹಬ್ಬಗಳ ಆಚರಣೆಗೆ ತಡೆಯೊಡ್ಡಿದ್ದಾರೆ.

ಶೆಟ್ಟರ್‌ ಕಾಲದಲ್ಲಿ ಒಂದು ಶಾಲೆಗೆ ಸೀಮಿತವಾಗಿ ಹೊರಡಿಸಿದ್ದ ನಿರ್ಬಂಧ ಆದೇಶವನ್ನು ಇಡೀ ರಾಜ್ಯಕ್ಕೆ ಅನ್ವಯವಾಗುವಂತೆ ಮಾಡಿದ ಕಾಂಗ್ರೆಸ್‌ ಸರ್ಕಾರ ಇದೀಗ ಹಿಂದೂಗಳ ವಿರೋಧ ಎದುರಿಸುತ್ತಿದೆ. ಆದರೆ ಕೆಲವು ಕಾಂಗ್ರೆಸ್‌ ಕಾರ್ಯಕರ್ತರು ಮಾತ್ರ “ಬಿಜೆಪಿ ಸರಕಾರ ತಂದ ಕಾನೂನು ಬಿಜೆಪಿಗೆ ಬಿಸಿ ತುಪ್ಪವಾಗುತ್ತಿದೆ” ಎಂದು ಮನಸ್ಸಲ್ಲೇ ಮುಸಿಮುಸಿ ನಗುತ್ತಿದ್ದಾರೆ. ಅದೇನೇ ಇದ್ದರೂ ಕಾಂಗ್ರೆಸ್‌ ಸರ್ಕಾರ ಬಹುಸಂಖ್ಯಾತ ಹಿಂದೂಗಳ ವಿರೋಧವನ್ನು ಕಟ್ಟಿಕೊಂಡೇ ಆಡಳಿತ ನಡೆಸುತ್ತಿದೆ. ಕಾಂಗ್ರೆಸ್‌ ಸರ್ಕಾರದ ಈ ಹಿಂದೂ ವಿರೋಧಿ ನಡೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಬಿಸಿತುಪ್ಪವಾಗಲಿದೆ.

Related Articles

Leave a Reply

Your email address will not be published. Required fields are marked *

Back to top button