Latest Newsಪ್ರಚಲಿತ

ಮಂಗಳೂರಿನತ್ತ ಮತ್ತೊಮ್ಮೆ ನಮೋ!

Share News

ದಕ್ಷಿಣ ಕನ್ನಡ ಜಿಲ್ಲೆಯ ಕೇಂದ್ರ ಬಿಂದು ಮಂಗಳೂರು ಝಗಮಗಿಸಲಿದೆ.‌ ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಸ್ಮಾರ್ಟ್ ಸಿಟಿ ಯೋಜನೆಯ ಮೂಲಕ ಕಂಗೊಳಿಸುತ್ತಿರುವ ಮಂಗಳೂರಿಗೆ ಮೋದಿ ಮತ್ತೊಂದು ಉಡುಗೊರೆ ನೀಡಿದ್ದಾರೆ. ಮಂಗಳೂರು ಜಂಕ್ಷನ್‌ ರೈಲ್ವೇ ನಿಲ್ದಾಣ ಕಾಮಗಾರಿಯ ಉದ್ಘಾಟನೆಯನ್ನು ಸ್ವತಃ ಪ್ರಧಾನಿಯೇ ಮಾಡಲಿದ್ದಾರೆ.

ಹೌದು, ಅಮೃತ್ ಭಾರತ್ ರೈಲು ನಿಲ್ದಾಣ ಯೋಜನೆಯಡಿ ಮಂಗಳೂರು ಜಂಕ್ಷನ್ ರೈಲು ನಿಲ್ದಾಣ ಅಂತರಾಷ್ಟ್ರೀಯ ಮಟ್ಟದಲ್ಲಿ ನಿರ್ಮಾಣಗೊಳ್ಳಲಿದ್ದು, ಆಗಸ್ಟ್ 6 ರಂದು ಶಿಲಾನ್ಯಾಸ ನೆರವೇರಲಿದೆ.

ವಿಡಿಯೋ ಕಾನ್ಫೆರೆನ್ಸ್ ಮೂಲಕ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಶಿಲಾನ್ಯಾಸ ನೆರವೇರಿಸಲಿದ್ದು ಅಂತರಾಷ್ಟ್ರೀಯ ಮಟ್ಟದ ಈ ಮಂಗಳೂರು ಜಂಕ್ಷನ್ ರೈಲು ನಿಲ್ದಾಣವು ಸುಮಾರು ರೂ. 19.32 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿದೆ.

2023-24ನೇ ಸಾಲಿನ ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಜಂಕ್ಷನ್ ರೈಲು ನಿಲ್ದಾಣ ಸೇರಿದಂತೆ ಮಂಗಳೂರು ಕೇಂದ್ರ ನಿಲ್ದಾಣ, ಬಂಟ್ವಾಳ ಹಾಗೂ ಸುಬ್ರಹ್ಮಣ್ಯ ರೈಲು ನಿಲ್ದಾಣಗಳನ್ನು ಅಮೃತ್ ಭಾರತ್ ರೈಲು ನಿಲ್ದಾಣ ಅಭಿವೃದ್ಧಿ ಯೋಜನೆಯಡಿಯಲ್ಲಿ ಅಭಿವೃದ್ಧಿ ಪಡಿಸಲಾಗುವುದೆಂದು ಘೋಷಿಸಲಾಗಿತ್ತು. ಈ ಯೋಜನೆಯ ಇತರೆ ರೈಲು ನಿಲ್ದಾಣಗಳ ನಿರ್ಮಾಣ ಕಾರ್ಯ ಶೀಘ್ರದಲ್ಲಿಯೇ ಕೈಗೆತ್ತಿಕೊಳ್ಳಲಾಗುವುದು ಎಂದು ಸಂಸದರಾದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಮಂಗಳೂರು ಜಂಕ್ಷನ್‌ನಲ್ಲಿ ಅಂತಾರಾಷ್ಟ್ರೀಯ ಮಟ್ಟದ ರೈಲು ನಿಲ್ದಾಣಕ್ಕೆ ಆ. 6ರಂದು ಶಿಲಾನ್ಯಾಸ ನೆರವೇರಿಸಲಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ರೈಲ್ವೇ ಸಚಿವ ಅಶ್ವಿನ್ ವೈಷ್ಣವ್ ಅವರನ್ನು ಸಂಸದ ನಳಿನ್‌ ಕುಮಾರ್‌ ಕಟೀಲ್‌ ಅಭಿನಂದಿಸಿದ್ದಾರೆ.

Leave a Reply

Your email address will not be published. Required fields are marked *

Back to top button