ಸಿದ್ದರಾಮಯ್ಯ ರಾಜೀನಾಮೆ!!!
ನ್ಯಾಯಾಲಯ ಸಿದ್ದರಾಮಯ್ಯ ಅವರ ಮುಡಾ ಹಗರಣದ ಕುರಿತಂತೆ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲರ ನಿರ್ಧಾರವನ್ನು ನ್ಯಾಯಾಲಯ ಎತ್ತಿಹಿಡಿದರೆ ಸಿದ್ದರಾಮಯ್ಯ ಅವರು ಇಂದೇ ರಾಜೀನಾಮೆ ನೀಡುವ ಪರಿಸ್ಥಿತಿ ಉದ್ಭವವಾಗಲಿದೆ.
ಭ್ರಷ್ಟಾಚಾರದ ಸುಲಿಗೆ ಸಿಲುಕಿರುವ ಕಾಂಗ್ರೆಸ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈ ದಿನ ಮಹತ್ವದ್ದಾಗಿರಲಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA) ನಿವೇಶನ ಹಂಚಿಕೆಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲರ (Governor) ಆದೇಶವನ್ನು ವಜಾಗೊಳಿಸುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಸಲ್ಲಿಸಿರುವ ಅರ್ಜಿ ಕುರಿತು ಇಂದು ಮತ್ತೆ ವಿಚಾರಣೆ ನಡೆಯಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ಗೆ ನೀಡಿರುವ ಅನುಮತಿ ಬಗ್ಗೆ ಇಂದು ತೀರ್ಪು ಹೊರಬೀಳುವ ಸಾಧ್ಯತೆಯಿದೆ. ಸಿದ್ದರಾಮಯ್ಯ ಪರವಾಗಿ ಗುರುವಾರ ವಕೀಲ ಅಭಿಷೇಕ್ ಮನು ಸಿಂಘ್ವಿ ಈಗಾಗಲೇ ವಾದ ಮಂಡಿಸಿದ್ದು. ಇಂದು ಪ್ರತಿವಾದಿಗಳ ಪರ ವಕೀಲರು ವಾದ ಮಂಡಿಸಲಿದ್ದಾರೆ. ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪರವಾಗಿ ಕೇಂದ್ರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ದೂರುದಾರ ಪ್ರದೀಪ್ ಪರವಾಗಿ ಪ್ರಭುಲಿಂದ ನಾವದಗಿ, ಸ್ನೇಹಮಯಿ ಕೃಷ್ಣ ಪರವಾಗಿ ಲಕ್ಷ್ಮೀ ಐಯ್ಯಂಗಾರ್ ಮತ್ತು ಟಿ ಜೆ ಅಬ್ರಾಹಂ ಪರವಾಗಿ ರಂಗನಾಥ ರೆಡ್ಡಿ ವಾದ ಮಂಡಿಸಲಿದ್ದಾರೆ.
ಒಂದು ವೇಳೆ ನ್ಯಾಯಾಲಯ ಸಿದ್ದರಾಮಯ್ಯ ಅವರ ಮುಡಾ ಹಗರಣದ ಕುರಿತಂತೆ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲರ ನಿರ್ಧಾರವನ್ನು ನ್ಯಾಯಾಲಯ ಎತ್ತಿಹಿಡಿದರೆ ಸಿದ್ದರಾಮಯ್ಯ ಅವರು ಇಂದೇ ರಾಜೀನಾಮೆ ನೀಡುವ ಪರಿಸ್ಥಿತಿ ಉದ್ಭವವಾಗಲಿದೆ.
ಮುಖ್ಯಮಂತ್ರಿ ಪದವಿಯನ್ನು ಉಳಿಸಿಕೊಳ್ಳಲು ಸಿದ್ದರಾಮಯ್ಯ ಅವರು ನಾನಾ ಕಸರತ್ತು ನಡೆಸುತ್ತಿದ್ದು ಈಗಾಗಲೇ ತಮ್ಮ ಹೈಕಮಾಂಡ್ ಮುಂದೆ ಹಗರಣದ ಕುರಿತು ಸಮಗ್ರ ಮಾಹಿತಿ ನೀಡಿದ್ದಾರೆ. ಒಂದು ವೇಳೆ ಮುಖ್ಯಮಂತ್ರಿ ವಿರುದ್ಧ ತನಿಖೆಗೆ ನ್ಯಾಯಾಲಯ ಇಂದು ಆದೇಶಿಸಿದರೆ ಸಿದ್ದರಾಮಯ್ಯ ಅವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದು ಖಚಿತವಾಗಿದೆ.